Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್

Advertisement

ತುಮಕೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಇತ್ತೀಚೆಗೆ ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾವುಕರಾಗಿ ಮಾತನಾಡಿದ್ದು, ಮುಖ್ಯಮಂತ್ರಿ ಸ್ಥಾನವು ಮೂರು ಬಾರಿ ಕೈತಪ್ಪಿದ ಕುರಿತು ನೋವು ತೋಡಿಕೊಂಡಿದ್ದಾರೆ. ಇದು ತಮ್ಮ ಬಹುಕಾಲದ ಕನಸಾಗಿದ್ದು, ರಾಜಕೀಯ ಸನ್ನಿವೇಶಗಳಿಂದಾಗಿ ಕೈಗೂಡಿಲ್ಲ ಎಂದು ಅವರು ಹೇಳಿದ್ದಾರೆ.

ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ಕೈತಪ್ಪಿದ ಬಗ್ಗೆ ಪರಮೇಶ್ವರ್ ಭಾವುಕರಾಗಿದ್ದಾರೆ. ನಾನು ಗೆದ್ದಿದ್ದರೆ 2013 ರಲ್ಲಿ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ ಎಂದಿದ್ದಾರೆ.2026 ರಲ್ಲೂ ಸಿಎಂ ಹುದ್ದೆಯ ನಿರೀಕ್ಷೆ ಇತ್ತು ಎಂದು ನೋವು ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿಯಾಗುವ ಅವಕಾಶ ಸಿಗಲಿಲ್ಲ

ಹಳೆಯ ನೆನಪುಗಳನ್ನು ಹಂಚಿಕೊಂಡ ಅವರು, 2013ರ ಚುನಾವಣೆಯಲ್ಲಿ ನಾನು ಸೋತಿದ್ದರಿಂದ ಮುಖ್ಯಮಂತ್ರಿ ಹುದ್ದೆ ಕೈತಪ್ಪಿತು. ಅಂದು ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಮುಂದುವರಿದು, 2018ರಲ್ಲಿ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿದ್ದರೂ ಮೈತ್ರಿ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದರು. ಅವತ್ತು ನನ್ನನ್ನೂ ಮುಖ್ಯಮಂತ್ರಿ ಮಾಡಬಹುದಿತ್ತು, ಆದರೆ ಆ ಅವಕಾಶ ಸಿಗಲಿಲ್ಲ ಎಂದು ಬೇಸರದಿಂದ ನುಡಿದಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST