LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹಾನಗಲ್ ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಾಜಕಾಲುವೆಯ ತಡೆಗೋಡೆ ಕುಸಿತ.!ಕಳಪೆ ಕಾಮಗಾರಿ ಆರೋಪ.?

Advertisement

ಹಾನಗಲ್: ಸರ್ಕಾರಿ ಕಾಮಗಾರಿಗಳಿಗೆ ಆಯುಷ್ಯ ಕಡಿಮೆಯಾಗಿದೆಯೇ, ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಲು ಮತ್ತೊಂದು ಘಟನೆ ಕಾರಣವಾಗಿದೆ. ಹಾನಗಲ್ ಪಟ್ಟಣದ ತಾಲೂಕು ಕ್ರೀಡಾಂಗಣದ ಬಳಿ ಸುಮಾರು ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಾಜಕಾಲುವೆಯ ತಡೆಗೋಡೆ ನಿರ್ಮಾಣವಾದ ಮೂರೇ ತಿಂಗಳಲ್ಲಿ ಕುಸಿದು ಬಿದ್ದಿದ್ದು, ಕಳಪೆ ಕಾಮಗಾರಿಯ ಆರೋಪಗಳು ಮತ್ತೆ ಕೇಳಿಬಂದಿವೆ.

ಸಣ್ಣ ನೀರಾವರಿ ಇಲಾಖೆಯಿಂದ ಕುಂದಾಪುರ ಮೂಲದ ಸನತ್ ಕನ್ಸ್ಟ್ರಕ್ಷನ್ ಕಂಪನಿಯಿಂದ ನಿರ್ಮಿಸಲಾದ ರಾಜಕಾಲುವೆಯ ತಡೆಗೋಡೆ ಸೋಮವಾರ ಏಕಾಏಕಿ ಕುಸಿದಿದೆ. ಪರಿಣಾಮ ಪಕ್ಕದ ತೋಟದಲ್ಲಿದ್ದ ನಾಲ್ಕು ವರ್ಷದ 50ಕ್ಕೂ ಹೆಚ್ಚು ಅಡಿಕೆ ಗಿಡಗಳು ನೆಲಕ್ಕುರುಳಿದ್ದು, ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

news_1786424576_0_277.webp

 

ಸ್ಥಳೀಯರ ಪ್ರಕಾರ, ಈ ಹಿಂದೆಯೂ ಇದೇ ಗೋಡೆ ಒಂದು ಬಾರಿ ಕುಸಿದಿತ್ತು. ಕಾಮಗಾರಿ ಆರಂಭದಿಂದಲೇ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಅದರ ಪರಿಣಾಮವೇ ಈಗ ಮತ್ತೆ ಗೋಡೆ ಕುಸಿದಿದೆ.

ಇನ್ನೂ "ಸಮರ್ಪಕ ಪ್ರಮಾಣದಲ್ಲಿ ಕಬ್ಬಿಣ ಮತ್ತು ಸಿಮೆಂಟ್ ಬಳಸದೇ ಕಾಮಗಾರಿ ನಡೆಸಿದ್ದರಿಂದ ಗೋಡೆ ಕುಸಿದಿದೆ. ನಮ್ಮ ತೋಟಕ್ಕೆ ಭಾರೀ ಹಾನಿಯಾಗಿದೆ. ಕಳಪೆ ಕಾಮಗಾರಿ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜೊತೆಗೆ ತೋಟದ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು" ಎಂದು ಜಮೀನಿನ ಮಾಲೀಕ ಗುರುರಾಜ ಏಸಕ್ಕನವರ್ ಆಗ್ರಹಿಸಿದ್ದಾರೆ.

ಘಟನೆಯ ಬಳಿಕ ಉನ್ನತ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಬೇಜವಾಬ್ದಾರಿ ತೋರಿದ ಅಧಿಕಾರಿಗಳು ಹಾಗೂ ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ವರದಿ: ರಮೇಶ್ ತಾಳಿಕೋಟಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ