Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಸಹಕಾರ ಸಂಘ ನೋಂದಣಿ ಪ್ರಮಾಣ ಪತ್ರ ಸಚಿವೆ ಹೆಬ್ಬಾಳಕರ್ ಗೆ ಹಸ್ತಾಂತರ 

Advertisement
ಬೆಂಗಳೂರು : ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು.ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಲಕ್ಷ್ಮೀಪತಯ್ಯ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರಿಗಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಿದ್ದಾರೆ.

ನವೆಂಬರ್‌ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ.

ಮಹಿಳೆಯರ ಸುರಕ್ಷತೆಗಾಗಿ ಅಕ್ಕಾಪಡೆಯನ್ನು ಸಜ್ಜುಗೊಳಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಮನೆಯ ಯಜಮಾನಿಯರ ಸಬಲೀಕರಣಕ್ಕಾಗಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಗೆ ಮತ್ತೊಂದು ಸ್ವರೂಪ ತಂದಿದ್ದಾರೆ.

ಶಾಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ‌ ಮಹೇಶ್ ಬಾಬು, ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ನಟರಾಜ್, ಎಂ.ಜಿ.ಪಾಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಖಾಸಗಿ ಫೈನಾನ್ಸ್‌, ನ್ಯಾಷನಲ್‌ ಬ್ಯಾಂಕ್‌ಗಳಲ್ಲಿ ದುಬಾರಿ ಬಡ್ಡಿಗೆ ಸಾಲ ಪಡೆದು ಮಹಿಳೆಯರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ.

ಇದೀಗ ಗೃಹಲಕ್ಷ್ಮೀ ಹಣದಿಂದಲೇ ಬ್ಯಾಂಕ್‌ ಆರಂಭಿಸಿ ಮಹಿಳೆಯರಿಗೆ ಸಂಕಷ್ಟದಲ್ಲಿ ಸಾಲದ ಸೌಲಭ್ಯ ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದೇ ನಮ್ಮ ಗುರಿ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ