Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಪಕ್ಷಗಳ ತೀವ್ರ ವಿರೋಧ ನಡುವೆ ದ್ವೇಷ ಭಾಷಣ ಮಸೂದೆ ಪಾಸ್ 

Advertisement
ಬೆಳಗಾವಿ: ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಯನ್ನು ವಿಧಾನಸಭೆಯಲ್ಲಿ ಸರ್ಕಾರ ಪಾಸ್‌ ಮಾಡುವಲ್ಲಿ ಯಶಸ್ವಿಯಾಗಿದೆ.

ಸರ್ಕಾರ ಮಂಡಿಸಿದ್ದ ಮಸೂದೆಗೆ ವಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು.

ವಿಧೇಯಕದ ಪ್ರತಿಗಳನ್ನು ಹರಿದು ಬಿಸಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ವಿಪಕ್ಷಗಳ ವಿರೋಧ ಹೆಚ್ಚಾಗುತ್ತಿದ್ದಂತೆ ಗದ್ದಲದ ನಡುವೆಯೇ ಮಸೂದೆಯನ್ನು ಸರ್ಕಾರ ಪಾಸ್‌ ಮಾಡಿಕೊಂಡಿತು.

ಮೊದಲ ದ್ವೇಷ ಭಾಷಣ ತಪ್ಪಿಗೆ 1 ರಿಂದ 7 ವರ್ಷ ಜೈಲು, 50 ಸಾವಿರ ರೂ ದಂಡ. ದ್ವೇಷ ಭಾಷಣ ಪುನರಾವರ್ತನೆಗೆ 2 ವರ್ಷದಿಂದ ಗರಿಷ್ಠ ಶಿಕ್ಷೆ 7 ವರ್ಷ ಜೈಲು, 1 ಲಕ್ಷ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕೊಡಲಾಗಿದೆ. ತಪ್ಪು ಪುನರಾವರ್ತನೆಗೆ ಈ ಮೊದಲು 10 ವರ್ಷ ಜೈಲು ಇದ್ದಿದ್ದನ್ನು 7 ಕ್ಕೆ ಇಳಿಸಲಾಗಿದೆ ಅಂತ ಪರಮೇಶ್ವರ್ ಸ್ಪಷ್ಟಪಡಿಸಿದರು.

ಈ ವೇಳೆ ಬಿಜೆಪಿ ಸದಸ್ಯರ ಆಕ್ಷೇಪ ಸಚಿವ ಬೈರತಿ ಸುರೇಶ್ ಕರಾವಳಿ ಬಗ್ಗೆ ನೀಡಿದ ಹೇಳಿಕೆ ಕೋಲಾಹಲ ಸೃಷ್ಟಿಸಿತ್ತು. ಕರಾವಳಿಯಲ್ಲಿ ಬೆಂಕಿ ಹಾಕಿ ಇಲ್ಲೂ ಬೆಂಕಿ ಹಾಕ್ತಿದ್ದಾರೆಂಬ ಬೈರತಿ ಸುರೇಶ್ ಹೇಳಿಕೆ ಬೆಂಕಿಗೆ ತುಪ್ಪ ಸುರಿದಂತಾಯ್ತು. ಕರಾವಳಿ ಶಾಸಕರು ಕೆರಳಿ ಏಕಾಏಕಿ ಸದನದ ಬಾವಿಗಿಳಿದರು.

ಇದರಿಂದ ವಿಪಕ್ಷಗಳ ಉಳಿದ ಸದಸ್ಯರಲ್ಲೂ ಗೊಂದಲ ಆಯ್ತು. ಕೊನೆಗೆ ಗದ್ದಲ ಹೆಚ್ಚಾಯ್ತು. ಗೊಂದಲ, ಗದ್ದಲದ ನಡುವೆ ಸರ್ಕಾರ ವಿಧೇಯಕ ಪಾಸ್ ಮಾಡಿಕೊಳ್ತು. ಅಶೋಕ್ ಸೇರಿ ಅನೇಕರು ಮಸೂದೆ ಪ್ರತಿಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್