Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಸಿಸಿಟಿವಿ ಇದ್ದರೆ ಹನಿಟ್ರ್ಯಾಪ್‌ ಮಾಡುವವರ ಮೇಲೆ ನಿಗಾ ಇಡಬಹುದು’

Advertisement
ರಾಜ್ಯ ರಾಜಕಾರಣವನ್ನೇ ಬೆಚ್ಚಿ ಬೀಳಿಸಿರುವ ಹನಿಟ್ರ್ಯಾಪ್‌ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ತಿದೆ. ಕಾಂಗ್ರೆಸ್‌ ಸಚಿವ ಕೆಎನ್‌ ರಾಜಣ್ಣ ಅವರೇ ಸದನದಲ್ಲಿ ಹನಿಟ್ರ್ಯಾಪ್‌ ಬಗ್ಗೆ ಹೇಳಿಕೆ ನೀಡಿ ಶಾಕ್‌ ಕೊಟ್ಟ ಬೆನ್ನಲ್ಲೇ ರಾಜಕೀಯವ ವಲಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ನಿನ್ನೆಯಷ್ಟೇ ಹನಿಟ್ರ್ಯಾಪ್‌ ಬಗ್ಗೆ ಹಲವು ಮಹತ್ವದ ವಿಚಾರಗಳನ್ನು ಬಹಿರಂಗಪಡಿಸಿದ್ದ ಕೆಎನ್‌ ರಾಜಣ್ಣ ಅವರು ಯುವತಿಯೊಬ್ಬಳು ಹೈಕೋರ್ಟ್‌ ವಕೀಲೆ ಎಂದು ಹೇಳಿಕೊಂಡು ಬಂದಿದ್ದಾಗಿ ತಿಳಿಸಿದ್ದರು.

ಈಗ ಸಿದ್ದರಾಮಯ್ಯ ಪುತ್ರ ಹಾಗೂ ಕಾಂಗ್ರೆಸ್‌ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ. ಕೆಲವರು ಹನಿಟ್ರ್ಯಾಪ್‌ ಮಾಡಬೇಕು ಎಂಬ ಕಾರಣಕ್ಕೆ ಸಚಿವರ ಮನೆಗಳಿಗೆ ಬರ್ತಾರೆ. ಹಾಗಾಗಿ ಸಚಿವರ ಮನೆಗಳಿಗೆ ಸಿಸಿಟಿವಿ ಹಾಕಿಸಲೇಬೇಕು. ಇನ್ನು ಸಚಿವರ ಮನೆಗಳಲ್ಲಿ ಸಿಸಿಟಿವಿ ಇಲ್ಲ ಎನ್ನುವ ವಿಚಾರದ ಬಗ್ಗೆ ನನಗೆ ಅಷ್ಟಾಗಿ ಗೊತ್ತಿಲ್ಲ. ಆದರೆ ತಂದೆ ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಿಸಿಟಿವಿ ಇದೆ. ನಾನು ಕೂಡ ಅಲ್ಲೇ ಇರುವುದರಿಂದ ಇದರ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಆದರೆ, ಬೇರೆಯವರ ಮನೆಗಳಲ್ಲಿ ಸಿಸಿಟಿವಿ ಇಲ್ಲದ ವಿಚಾರ ಗೊತ್ತಿಲ್ಲ ಎಂದು ಯತೀಂದ್ರ ಹೇಳಿದ್ದಾರೆ.

ಇನ್ನು ಬಿಜೆಪಿಯವರ ವಿಚಾರಕ್ಕೆ ಬಂದರೆ, ಬಿಜೆಪಿಯಲ್ಲೇ ಹಲವು ಹನಿಟ್ರ್ಯಾಪ್‌ಗಳು ನಡೆದಿವೆ. ಬಿಜೆಪಿಯ ನಾಯಕರ ವಿಡಿಯೋಗಳನ್ನ ಬಿಜೆಪಿ ಪಕ್ಷದವರೇ ಮಾಡಿಕೊಂಡು ಇಟ್ಟಿದ್ದಾರೆ. ವಿಡಿಯೋವನ್ನ ಬಿಜೆಪಿಯವರೇ ಮಾಡಿಕೊಂಡು ಇಟ್ಟಿದ್ದಾರೆ. ಈ ಕಾರಣಕ್ಕಾಗಿಯೇ ಕೆಲ ಬಿಜೆಪಿ ಶಾಸಕರು, ಮಾಜಿ ಮುಖ್ಯಮಂತ್ರಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕೋರ್ಟ್‌ನಿಂದ ಸ್ಟೇ ತಂದಿದ್ದಾರೆ. ಅವರ ಕಥೆಯೇ ಹೀಗಿರುವಾಗ ಬಿಜೆಪಿಯವರಿಗೆ ಕಾಂಗ್ರೆಸ್‌ ನಾಯಕರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಚಿವರ ಸರ್ಕಾರಿ ನಿವಾಸಗಳಲ್ಲಿ ಸಿಸಿಟಿವಿ ಇಲ್ಲ ಎನ್ನುವ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಪೊಲೀಸ್ ಬಂದೂಬಸ್ತ್ ಕೂಡ ಬಿಗಿಯಾಗಿದೆ. ಇಲ್ಲಿಗೆ ಯಾರೇ ಬಂದರೂ ವಿಡಿಯೋ ರೆಕಾರ್ಡ್ ಆಗು ತ್ತದೆ. ಹಾಗಾಗಿ ಉಳಿದ ಸಚಿವರ ಮನೆಗೂ ಸಿಸಿಟಿವಿ ಕ್ಯಾಮರಾ ಹಾಕಲೇಬೇಕು. ಏಕೆಂದರೆ, ಸಿಸಿಟಿವಿ ಇದ್ದರೆ ಹನಿಟ್ರ್ಯಾಪ್‌ ಮಾಡುವವರ ಮೇಲೆ ನಿಗಾ ಇಡಬಹುದು ಎಂದೂ ಯತೀಂದ್ರ ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ