Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊರೊನಾ ಲಸಿಕೆಯಿಂದ ಹೃದಯಾಘಾತ : ಸಿದ್ದರಾಮಯ್ಯ ಶಂಕೆ 

Advertisement
ಬೆಂಗಳೂರು: ರಾಜ್ಯದಲ್ಲಿ ಹೃದಯಸ್ತಂಭನದಿಂದ ಯುವಜನರ ಹಠಾತ್ ಸಾವಿಗೆ ಆತುರಾತುರದಲ್ಲಿ ಕೊರೊನಾ ಲಸಿಕೆಗೆ ಅಧಿಕೃತ ಅನುಮೋದನೆ ಕೊಟ್ಟು, ಜನರಿಗೆ ಹಂಚಿದ್ದು ಕೂಡ ಈ ಸಾವುಗಳಿಗೆ ಕಾರಣವಿರಬಹುದು ಎಂಬುದನ್ನು ಅಲ್ಲಗಳೆಯಲಾಗದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಎಳೆಯ ವಯಸ್ಸಿನವರ, ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ಬದುಕಿ ಬಾಳಬೇಕಾದ ಚಿಕ್ಕಮಕ್ಕಳು, ಯುವಜನರು, ಅಮಾಯಕರ ಜೀವಗಳ ಬೆಲೆ, ಅವರ ಕುಟುಂಬಸ್ಥರ ಕಾಳಜಿ ನಮಗೂ ಇದೆ. ಇಂತಹ ವಿಚಾರಗಳನ್ನು ಕೂಡ ತಮ್ಮ ರಾಜಕೀಯ ಸಾಧನೆಗೆ ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ ನಾಯಕರ ನಡೆಯನ್ನು ನಾನು ಖಂಡಿಸುತ್ತೇನೆ. ಆತುರಾತುರದಲ್ಲಿ ಕೊರೊನಾ ಲಸಿಕೆಗೆ ಅಧಿಕೃತ ಅನುಮೋದನೆ ಕೊಟ್ಟು, ಜನರಿಗೆ ಹಂಚಿದ್ದು ಕೂಡ ಈ ಸಾವುಗಳಿಗೆ ಕಾರಣವಿರಬಹುದು ಎಂಬುದನ್ನು ಅಲ್ಲಗಳೆಯಲಾಗದು, ಕಾರಣ ವಿಶ್ವದ ಅನೇಕ ಅಧ್ಯಯನಗಳು ಇತ್ತೀಚೆಗೆ ಹೆಚ್ಚಾಗಿರುವ ಹೃದಯ ಸ್ತಂಭನಕ್ಕೆ ಕೊವಿಡ್ ಲಸಿಕೆ ಕಾರಣ ಎಂಬುದನ್ನು ಹೇಳಿವೆ. ಈ ವಿಚಾರದಲ್ಲಿ ಬಿಜೆಪಿಯವರು ನಮ್ಮನ್ನು ಟೀಕಿಸುವ ಮುನ್ನ ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಲಿ ಎಂದು ಸಿಎಂ ತಿಳಿಸಿದ್ದಾರೆ.

ಹಾಸನ ಜಿಲ್ಲೆಯು ಸೇರಿದಂತೆ ರಾಜ್ಯದಲ್ಲಿ ಸಂಭವಿಸುತ್ತಿರುವ ಹಠಾತ್ ಸರಣಿ ಸಾವುಗಳಿಗೆ ನೈಜ ಕಾರಣ ಪತ್ತೆಮಾಡಿ, ತಡೆಯುವ ನಿಟ್ಟಿನಲ್ಲಿ ನಾವು ಸಂಪೂರ್ಣ ಬದ್ಧರಿದ್ದೇವೆ. ಈ ಉದ್ದೇಶದಿಂದಲೇ ಹೃದಯ ಜ್ಯೋತಿ ಮತ್ತು ಗೃಹ ಆರೋಗ್ಯದಂತಹ ಯೋಜನೆಗಳನ್ನು ಈಗಾಗಲೇ ಜಾರಿಗೆಕೊಟ್ಟು, ಸಾರ್ವಜನಿಕರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಡಾ. ರವೀಂದ್ರನಾಥ್ ಅವರ ನೇತೃತ್ವದ ತಜ್ಞರ ಸಮಿತಿ ವರದಿ ಆಧರಿಸಿ ಅಗತ್ಯ ಕ್ರಮಗಳನ್ನು ಕೂಡ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಜನರ ಆರೋಗ್ಯ ರಕ್ಷಣೆಗಾಗಿ ಒಂದು ಸರ್ಕಾರವಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಾವು ಮಾಡುತ್ತಿದ್ದು, ಸಾರ್ವಜನಿಕರು ಎದೆನೋವು, ಉಸಿರಾಟದ ತೊಂದರೆ ಕಂಡುಬಂದರೆ ಅಲಕ್ಷ್ಯ ತೋರದೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಬೇಕು ಎಂದು ಮನವಿ ಮಾಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ