Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಮೂರು ದಿನ ಭಾರಿ ಮಳೆ : 8 ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಣೆ. 

Advertisement

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಾರುತಗಳು ತೀವ್ರವಾಗಿ ಚುರುಕುಗೊಂಡಿದ್ದು, ಜೂನ್ 8 ರಿಂದ ಜೂನ್ 10 ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಒಟ್ಟು 8 ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ.

ಪ್ರವಾಹದಂತಹ ಪರಿಸ್ಥಿತಿ ಎದುರಾದರೆ ಅದನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿರುವಂತೆ ಇಲಾಖೆಯು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಜೂನ್ 8 ರಿಂದ 10 ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

 ಉಡುಪಿ,ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಎರಡು ದಿನ ಇಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಜೂನ್ 10 ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ಈ ಮೂರು ದಿನಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಸಾರ್ವಜನಿಕರು ಹಾಗೂ ನದಿ ತೀರದ ನಿವಾಸಿಗಳು ಜಾಗರೂಕರಾಗಿರಲು ಸೂಚಿಸಲಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಂಬಲ್ಡನ್ ಟೆನಿಸ್: ಫೈನಲ್ ತಲುಪಿದ ಜಾನ್ನಿಕ್ ಸಿನ್ನೇರ್ಇಂದು ಜಿಂಬಾಬ್ವೆ- ಬಾಂಗ್ಲಾದೇಶ ಮೂರನೇ ಏಕದಿನ ಪಂದ್ಯಭಾರತ ಇಂಗ್ಲೆAಡ್ ಕಡೆಯ ಟ್ವೆಂಟಿ-೨೦ ಇಂದುಮೊಬೈಲ್‌ನಲ್ಲಿ ರೈಲು ಟಿಕೆಟ್ ತೋರಿಸಿದ್ದರೇ ದಂಡ : ರೈಲು ಇಲಾಖೆ ಹೊಸ ನಿಯಮ ಸುಳ್ಳು ಮಾಹಿತಿ ನೀಡಿ ಸರ್ಕಾರಿ ನೌಕರಿ  : ಕೆಪಿಎಸ್ಸಿ ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ ತಿಪಟೂರಿನ ಕೊಬ್ಬರಿ, ಸಾಣಿಕಟ್ಟೆ ಉಪ್ಪು ಸೇರಿ ರಾಜ್ಯದ ನಾಲ್ಕು ಉತ್ಪನ್ನಗಳಿಗೆ ಜಿಐ ಮಾನ್ಯತೆ ಉತ್ತಮ ಮೊತ್ತದತ್ತ ಭಾರತ ವನಿತೆಯರುಸರ್ವೋಚ್ಚ ನ್ಯಾಯಾಲಯದಲ್ಲಿ ಆಘಾತಕಾರಿ ಘಟನೆ : ಕಡತಗಳನ್ನ ಸಿಜೆಗೆ ಎಸೆದ ಅರ್ಜಿದಾರಸಾಂಸ್ಕೃತಿಕ ಹಾಗೂ ಕ್ರೀಡೆ ಶಿಕ್ಷಣದ ಮುಖ್ಯ ಅಂಗ:ಬಂಗಾರಿ ಆರ್ ಎಸ್ ಎಸ್ ಸಭೆ ಬಳಿಕ ಏನಾದರೂ ಅನಾಹುತ ಆಗುತ್ತೆ : ಬಿ. ಕೆ ಹರಿಪ್ರಸಾದ್