Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಬ್ಬಾಳಕರ್ ಸಚಿವ ಸ್ಥಾನಕ್ಕಾಗಿ ಬಿಗಿಪಟ್ಟು : ಬೆಂಬಲಿಗರ ಬೃಹತ್ ಪ್ರತಿಭಟನೆ 

Advertisement

ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರವಾಗಿ ಬೆಂಕಿ ಆರುವ ಲಕ್ಷಣ ಕಾಣಿಸುತ್ತಿಲ್ಲ. ಇಂದು ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ಆದರೆ ಡಿಕೆ ಶಿವಕುಮಾರ್‌ ಅವರ ಸಚಿವ ಸಂಪುಟದಲ್ಲಿ ಗಮನಿಸಬೇಕಾದ ಮುಖ್ಯವಾದ ಅಂಶ ಎಂದರೆ ಅದು ಮಹಿಳಾ ಸಚಿವರೇ ಇಲ್ಲ ಎನ್ನುವುದು.

ಹಿಂದಿನ ಸಿದ್ದರಾಮಯ್ಯ ಸಂಪುಟದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಅವರು ಸಚಿವೆಯಾಗಿದ್ದರು. ಆದರೆ ಈ ಬಾರಿ ಅವರಿಗೂ ಸಚಿವ ಸ್ಥಾನ ಲಭಿಸಿಲ್ಲ. ಸರ್ಕಾರದ ಈ ನಿರ್ಧಾರ ಲಕ್ಷ್ಮಿ ಹೆಬ್ಬಾಳ್ಕರ್‌ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಅವರ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ನಗರದ ಐತಿಹಾಸಿಕ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ನಾಯಕಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಲೇಬೇಕು ಎಂದು ಪಟ್ಟು ಹಿಡಿದರು.

ಬೆಳಗಾವಿ ಜಿಲ್ಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಪಕ್ಷವನ್ನು ಬಲಪಡಿಸಲು ನಿರಂತರವಾಗಿ ಶ್ರಮಿಸಿದ್ದಾರೆ ಮತ್ತು ಮಹಿಳಾ ಪ್ರತಿನಿಧಿಯಾಗಿ ದೊಡ್ಡ ಮಟ್ಟದ ಜನಬೆಂಬಲ ಹೊಂದಿದ್ದಾರೆ ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಪ್ರತಿಪಾದಿಸಿದರು. 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಅವರಿಗೆ ಈ ಬಾರಿ ಮಂತ್ರಿ ಸ್ಥಾನ ಕೈತಪ್ಪಬಾರದು. ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ಅವರನ್ನು ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬೆಂಬಲಿಗರು ಎಚ್ಚರಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೆಬ್ಬಾಳಕರ್ ಸಚಿವ ಸ್ಥಾನಕ್ಕಾಗಿ ಬಿಗಿಪಟ್ಟು : ಬೆಂಬಲಿಗರ ಬೃಹತ್ ಪ್ರತಿಭಟನೆ ಮೊಬೈಲ್ ಕೊಡಿಸದಕ್ಕೆ ಮನನೊಂದು 13 ವರ್ಷದ ಬಾಲಕ ಆತ್ಮಹತ್ಯೆ ಬಾಡಿಗೆ ಮನೆಯಲ್ಲೇ ವಾಸಿಸುತ್ತಿರುವ ಸರಳತೆಯ ಶಾಸಕನಿಗೆ ಒಲಿದ ಸಚಿವ ಸ್ಥಾನ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಮರುಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಪೊಲೀಸ್ ಪರೀಕ್ಷೆ ಬರೆದು ಬರುವಾಗ ದುರಂತ : ಟ್ರ್ಯಾಕ್ಟರ್ ಡಿಕ್ಕಿಯಾಗಿ ಯುವಕ ಸಾವು 5.50 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಸಿ ವಿಜಯಾನಂದ ಕಾಶಪ್ಪನವರ ಮೊದಲ ಬಾರಿಗೆ ಸಚಿವ ಸ್ಥಾನಕೈತಪ್ಪಿದ ಮಂತ್ರಿ ಸ್ಥಾನ : ಹೆಬ್ಬಾಳ್ಕರ್ ಬೆಂಬಲಿಗರಿಂದ ರಸ್ತೆ ತಡೆದು ಪ್ರತಿಭಟನೆ 2004 ಹಾಗೂ 2013ರಲ್ಲಿ ನನಗೆ ಮಂತ್ರಿಗಿರಿ ತಪ್ಪಿತು, ತಾಳ್ಮೆಯಿಂದ ಇರಿ : ಡಿ.ಕೆ.ಶಿವಕುಮಾರ್ ವಾರ್ಡ್ ನಂ 16 ರಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮನವಿ