ಧಾರವಾಡ: ಧಾರವಾಡದಲ್ಲಿ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣನವರ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕರ್ನಾಟಕ ವಿವಿ ರಸ್ತೆಯ ರನ್ಕಾಸ್ಟೆಲ್ಲೋ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ವೈದ್ಯ ಕಿರಣ್ ಅವರನ್ನು ಪತ್ನಿ ಡಾ.ಪ್ರಿಯಾ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅವರ 10 ವರ್ಷದ ಮಗನ ಮೇಲೆಯೂ ಹಲ್ಲೆ ನಡೆಸಲಾಗಿದೆ.
ಡಾ. ಕಿರಣ್ ಹೊನ್ನಣ್ಣನವರ್ ಅವರನ್ನು ಪತ್ನಿ ಪ್ರಿಯಾ ಹತ್ಯೆ ಮಾಡಿದ್ದಾರೆ ಎನ್ನಲಾಗಿದ್ದು, ಹಲ್ಲೆಗೊಳಗಾದ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ನಡೆದ ಅಪಾರ್ಟ್ಮೆಂಟ್ ಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಿಯಾ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತಾಗಿ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.


