LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇನ್ಮುಂದೆ ಎಲ್ಲ ರಾಷ್ಟ್ರೀಯ ಕಾರ್ಯಕ್ರಮಗಳು ಪೋಲಿಸ್ ಗ್ರೌಂಡ್ ನಲ್ಲಿ ಆಯೋಜನೆ : ತಹಶೀಲ್ದಾರ್ ಪ್ರಕಾಶ ಗಾಯಕವಾಡ್

Advertisement

ರಾಮದುರ್ಗ  : ಬೆಳಗಾವಿ  ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ರಾಮದುರ್ಗ ತಾಲೂಕಾಡಳಿತವು ಮಹತ್ವದ ಬದಲಾವಣೆಯನ್ನು ಮಾಡಿದ್ದು ಇನ್ಮುಂದೆ ಎಲ್ಲ ಸರ್ಕಾರಿ ರಾಷ್ಟ್ರೀಯ ಕಾರ್ಯಕ್ರಮಗಳು  ಪಟ್ಟಣದ ಬಸವೇಶ್ವರ ಶಾಲೆ ಹತ್ತಿರದ ಪೋಲಿಸ್ ಗ್ರೌಂಡ್ ನಲ್ಲಿ ನಡೆಯಲಿವೆ ಎಂದು ತಹಶೀಲ್ದಾರ್ ಪ್ರಕಾಶ ಗಾಯಕವಾಡ್ ಅವರು ತಿಳಿಸಿದರು. 

ಈ ಕುರಿತು ಬುಧವಾರ ತಮ್ಮ ಕಚೇರಿಯಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು “ ಪ್ರತಿವರ್ಷ ರಾಷ್ಟ್ರೀಯ ಕಾರ್ಯಕ್ರಮಗಳನ್ಮು ನಮ್ಮ ರಾಮದುರ್ಗ ಪಟ್ಟಣದ ಹಳೆ ಕೋರ್ಟ್ ಆವರಣದಲ್ಲಿ  ನಡೆಸಲಾಗುತ್ತಿತ್ತು. ಈ ಬಾರಿ ಅದನ್ನು ಬದಲಾಯಿಸಿ ಪೋಲಿಸ್ ಗ್ರೌಂಡ್ ನಲ್ಲಿ ನಡೆಸಲು ನಿರ್ಧರಿಸಲಾಗಿದೆ. 

ಹಳೇ ಕೋರ್ಟ್, ಅರಮನೆ ಆವರಣದಲ್ಲಿ ಮುಖ್ಯವಾಗಿ ಸ್ಥಳಾವಕಾಶದ ಕೊರತೆ ಹೆಚ್ಚಾಗಿದೆ. ಕಾರ್ಯಕ್ರಮಗಳಲ್ಲಿ ಶಾಲಾ ವಿದ್ಯಾರ್ಥಿಗಳು, ಅಧಿಕಾರಿಗಳು, ಸಾರ್ವಜನಿಕರು ಹೆಚ್ಚಾಗಿ ಸೇರುವುದರಿಂದ ಜನಸಂದಣಿ ಉಂಟಾಗುತ್ತಿದೆ. 

ಇದರ ನಡುವೆ ಪೋಲಿಸ್ ಪರೇಡ್, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಅಡಚಣೆಯಾಗುತ್ತಿದೆಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದ್ದಾರೆ. 

ಬಸವೇಶ್ವರ ಶಾಲೆ ಹತ್ತಿರವಿರುವ ಪೋಲಿಸ್ ಗ್ರೌಂಡ್ ವಿಶಾಲವಾದ ಮೈದಾನವಿದೆ. ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬಹುದು. ಮತ್ತು ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಡೆಸಲು ಅದು ಸೂಕ್ತ ಸ್ಥಳವಾಗಿದೆ. 

ಹಾಗಾಗಿ ತಾಲೂಕ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಎಲ್ಲರೂ ಒಮ್ಮತದಿಂದ ಈ ನಿರ್ಧಾರ ಕೈಗೊಂಡಿದ್ದು ಶಾಸಕರು ಸಹ ಇದಕ್ಕೆ ಒಪ್ಪಿಗೆಯನ್ನು ನೀಡಿದ್ದಾರೆ, ಹಾಗಾಗಿ ಇನ್ಮುಂದೆ ಎಲ್ಲ ತಾಲೂಕ ಮಟ್ಟದ ಕಾರ್ಯಕ್ರಮಗಳು, ರಾಷ್ಟ್ರೀಯ ಕಾರ್ಯಕ್ರಮಗಳು ಪೋಲಿಸ್ ಗ್ರೌಂಡ್ ನಲ್ಲಿ ನಡೆಯಲಿದೆ ಎಂದು ಹೇಳಿದರು.

 ವರದಿ : ಮಂಜುನಾಥ ಕಲಾದಗಿ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್