ಬೆಂಗಳೂರು: ರಾಜ್ಯದ ವಿವಿಧ ಹಂತಗಳಲ್ಲಿ ಸರ್ಕಾರಿ ಹಾಗೂ ನಾಗರಿಕ ಸೇವೆಗಳನ್ನು ಒದಗಿಸುತ್ತಿರುವ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳು ಇನ್ನುಮುಂದೆ 'ಪ್ರಜಾಸೇವಾ ಕೇಂದ್ರ' ಎಂದು ಮರುನಾಮಕರಣಗೊಳ್ಳಲಿವೆ.
ಸಿಎಂ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಪ್ರಜಾಸೇವೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಈ ಕುರಿತು ಆದೇಶಿಸಿದ್ದಾರೆ.
ಪ್ರಜಾಸೇವಾ ಇಲಾಖೆಯ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ (ಇಡಿಸಿಎಸ್) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ನಾಗರಿಕ ಸೇವಾ ಕೇಂದ್ರಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ 'ಪ್ರಜಾ ಸೇವಾ ಕೇಂದ್ರ' ಎಂದು ಮರುನಾಮಕರಣ ಮಾಡಲಾಗಿದೆ.
ತಕ್ಷನದಿಂದಲೇ ಎಲ್ಲಾ ಅಧಿಕೃತ ಪತ್ರ ವ್ಯವಹಾರಗಳು, ನಾಮಫಲಕಗಳು, ವೆಬ್ ಪೋರ್ಟಲ್‌ಗಳು, ತಂತ್ರಾಂಶಗಳು, ಸ್ವೀಕೃತಿಗಳು ಹಾಗೂ ಪ್ರಚಾರ ಸಾಮಗ್ರಿಗಳಲ್ಲಿ 'ಪ್ರಜಾ ಸೇವಾ ಕೇಂದ್ರ' ಎಂದೇ ಉಲ್ಲೇಖಿಸುವುದು ಕಡ್ಡಾಯವಾಗಿದೆ.
ಕೇಂದ್ರಗಳ ನಿರ್ವಾಹಕರು ಮತ್ತು ಫ್ರಾಂಚೈಸಿಗಳೊಂದಿಗಿನ ಒಪ್ಪಂದಗಳಲ್ಲಿ, ಪೋರ್ಟಲ್ ಮತ್ತು ತಂತ್ರಾಂಶಗಳಲ್ಲಿ ಹೊಸ ಹೆಸರನ್ನು ಅಳವಡಿಸುವುದು ಸೇರಿದಂತೆ ರಾಜ್ಯಾದ್ಯಂತ ಏಕರೂಪದ ಬ್ರಾಂಡಿಂಗ್‌ನೊಂದಿಗೆ ಆದ್ಯತೆಯ ಮೇರೆಗೆ ಇದನ್ನು ಜಾರಿಗೊಳಿಸಲು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ನಿರ್ದೇಶಕರಿಗೆ ಸೂಚಿಸಲಾಗಿದೆ.


