LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Education News

ಟಿಇಟಿ ಪರೀಕ್ಷೆ ಅರ್ಜಿ ಆಹ್ವಾನ : ಸಂಪೂರ್ಣ ಮಾಹಿತಿ ಇಲ್ಲಿದೆ

Advertisement

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 18 ಸಾವಿರ ಶಿಕ್ಷಕರ ನೇಮಕಕ್ಕೆ ಮುಂದಡಿ ಇಟ್ಟಿರುವ ರಾಜ್ಯ ಸರ್ಕಾರ ಡಿ.7ರಂದು ಅರ್ಹತಾ ಪರೀಕ್ಷೆ (ಟಿಇಟಿ) ನಿಗದಿಪಡಿಸಿದೆ.


ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ.ಅ.23ಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ನ.9ವರೆಗೆ ಅವಕಾಶ ಇರಲಿದೆ. ಡಿ.7ರಂದು ಪತ್ರಿಕೆ-1, ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ. ಇನ್ನು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಬಡ್ತಿ ಪಡೆಯಲು ಶಿಕ್ಷಕರ ಅರ್ಹತಾ ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದಿಂದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ದಿನಾಂಕ 23-10-2025ರಿಂದ ದಿನಾಂಕ 09-11-2025ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಎಂದಿದೆ.

ಟಿಇಟಿ ಪರೀಕ್ಷೆ ದಿನಾಂಕ ಹೀಗಿದೆ

ಟಿಇಟಿ ಪರೀಕ್ಷೆಯು ಪತ್ರಿಕೆ-1ಕ್ಕೆ ದಿನಾಂಕ 07-12-2025ರ ಭಾನುವಾರ ಬೆಳಗ್ಗೆ 9.30ರಿಂದ 12 ಗಂಟೆಯವರೆಗೆ ನಡೆಯಲಿದೆ. ಪತ್ರಿಕೆ-2ರ ಪರೀಕ್ಷೆಯು ಮಧ್ಯಾಹ್ನ 2ರಿಂದ ಸಂಜೆ 4.30ರವರೆಗೆ ನಡೆಯಲಿದೆ ಎಂದಿದೆ.

ಅಭ್ಯರ್ಥಿಗಳು ಅರ್ಜಿಯನ್ನು https://schooleducation.karnataka.gov.in ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸದು ದಿನಾಂಕ 09-11-2025 ಕೊನೆಯ ದಿನವಾಗಿದೆ ಎಂದು ತಿಳಿಸಿದೆ.

ಪರೀಕ್ಷಾ ಶುಲ್ಕದ ವಿವರ

ಸಾಮಾನ್ಯ ವರ್ಗ, 2ಎ, 2ಬಿ, 3ಎ ಮತ್ತು 3ಬಿಗೆ ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ ರೂ.700, ಪತ್ರಿಕೆ-1 ಹಾಗೂ ಪತ್ರಿಕೆ-2ಕ್ಕೆ ರೂ.1000.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.300, ರೂ.500. ವಿಶೇಷ ಚೇತನ, ದಿವ್ಯಾಂಗ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ ಸಂಬಂಧಿಸಿದಂತೆ ಅಧಿಸೂಚನೆಯ ಸಂಪೂರ್ಣ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ https://schooleducation.karnataka.gov.in ಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್