Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 18 ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುಸುತ್ತಿರುವ ಶಿಲಾರಕೊಟ್ ಗ್ರಾಮಸ್ಥರು

Advertisement
ಸೇಡಂ: ತಾಲೂಕಿನ ಶಿಲಾರಕೊಟ್ ಗ್ರಾಮದ ಇಂದಿರಾ ಗಾಂಧಿಯ ಆವಾಜ್ ಯೋಜನೆ ಅಡಿಯಲ್ಲಿ 2008-09ನೇ ವರ್ಷದಲ್ಲಿ ನಿರ್ಮಾಣವಾಗಿರುವ ಇಂದಿರಾ ನಗರ ಎಂಬ ಹೆಸರಿನಲ್ಲಿ ಸುಮಾರು 30 ಮನೆಗಳಿಗೆ ನಿರಿನ ಸೌಲಭ್ಯವಿಲ್ಲದ ಸಾರ್ವಜನಿಕರು ಪರದಾಡುತ್ತಿದ್ದಾರೆ.



ಇಲ್ಲಿನ ನಿವಾಸಿಗಳಿಗೆ ಸಾಮಾಜಿಕ ಬಹಿಷ್ಕರಣ ಮಾಡಿದ್ದಂತೆ ಆಗಿದೆ. ಸುಮಾರು ಇಪ್ಪತ್ತು ಕುಟುಂಬಗಳು ವಾಸಿಸುತ್ತಿದ್ದು ಅವರಿಗೆ ನೀರು, ರಸ್ತೆ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳ ತೊಂದರೆ ಇದೆ.

ಗ್ರಾಮ ಪಂಚಾಯತ್ ಅಧಿಕಾರಿಗಳು, ಶಾಸಕರುಗಳು ಈ ಓಣಿಗೆ ಅಲ್ಪಕರುಣೆ ತೋರುತ್ತಿಲ್ಲ ಎಂಬುದು ಇಲ್ಲಿನ ನಿವಾಸಿಗಳ ಅಕ್ರೋಶವಾಗಿದೆ. ಕೆಲವೊಂದು ಸಮಯ ನೀರಿನ ತೊಂದರೆಯಿಂದಾಗಿ ಶಾಲಾ, ಕಾಲೇಜುಗಳಿಗೆ ಹೋಗಲು ತೊಂದರೆ ಆಗಿರುತ್ತದೆ ಎಂದು ವಿದ್ಯಾರ್ಥಿಗಳ ಆಕ್ರೋಶವಾಗಿದೆ.

[video width="848" height="478" mp4="https://bharathvaibhav.com/wp-content/uploads/2025/08/WhatsApp-Video-2025-08-05-at-4.07.05-PM.mp4"][/video]

ಈ ಮದ್ಯ ಕಾಲದಲ್ಲಿ ಜೆಜೆಎಂ ಯೋಜನೆಯಲ್ಲಿ ಮನೆ ಮನೆಗೆ ನಳ ಅಳವಡಿಸಿದ್ದು ಯಾವುದೇ ಉಪಯೋಗಕ್ಕೆ ಬಾರದಂತಿದೆ, ಜೆಜೆಎಂ ಗುತ್ತಿಗೆದಾರರಿಗೆ ಕೇಳಿದರೆ ಬಿಲ್ ಆಗಿಲ್ಲ ಎಂದು ಹೇಳಿಕೆ ಕೊಡುತ್ತಿದ್ದಾರೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಅನೇಕ ಬಾರಿ ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಿದರು ಇತ್ತಕಡೆ ಗಮನ ಕೊಡುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.



ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇಷ್ಟು ದಿನ ಇಲ್ಲಿ ಇಂತಹ ಒಂದು ಸಮಸ್ಯೆ ಇದೆ ಎಂದು ನನ್ನ ಗಮನಕ್ಕೆ ಬಂದಿಲ್ಲ. ಸಾರ್ವಜನಿಕರು ನನ್ನ ಗಮನಕ್ಕೆ ತಂದಿದ್ದಾರೆ ಈ ಕಾಲೋನಿಗೆ ಸಂಬಂದಿಸಿದ ಸಮಸ್ಯಗಳಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಡಾ.ಮಧುಸೂಧನ್ ರೆಡ್ಡಿ ಪಾಟೀಲ್ ಅವರು ಗ್ರಾಮಸ್ಥರ ಜೊತೆ ಮಾತನಾಡಿ ಅವರ ಸಮಸ್ಯಗಳಿಗೆ ಅತಿ ಶೀಘ್ರದಲ್ಲೇ ಪರಿಹಾರ ನೀಡಲಾಗುವುದು ಎಂದು ಹೇಳಿಕೆ ನೀಡಿದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ