ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ದಾಖಲಾತಿಗೆ ಕಡ್ಡಾಯ ವಯೋಮಿತಿ ನಿಗದಿಪಡಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯು ಒಂದು ವಾರದೊಳಗೆ ಸೂಕ್ತ ಆದೇಶ ಹೊರಡಿಸಬೇಕು ಎಂದು ನ್ಯಾಯಾಲಯ ತಾಕೀತು ಮಾಡಿದೆ.
ಕಳೆದ ಮಾರ್ಚ್ 28ರಂದು ಶಿಕ್ಷಣ ಇಲಾಖೆಯು ಒಂದನೇ ತರಗತಿ ದಾಖಲಾತಿಗೆ ಕನಿಷ್ಠ ವಯೋಮಿತಿಯನ್ನು ನಿಗದಿಪಡಿಸಿ ಆದೇಶ ಹೊರಡಿಸಿತ್ತು.
ಸರ್ಕಾರದ ಈ ನಿಯಮವನ್ನು ಪ್ರಶ್ನಿಸಿ ಬೆಂಗಳೂರಿನ ಮಾಸ್ಟರ್ ಕೃಷ್ಣ, ಗಣೇಶ್ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ರಜಾಕಾಲೀನ ಏಕಸದಸ್ಯ ಪೀಠ ನಡೆಸಿತು.
ಒಂದನೇ ತರಗತಿ ದಾಖಲಾತಿಯ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮರುಪರಿಶೀಲನೆ ನಡೆಸಬೇಕು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು ಒಂದು ವಾರದೊಳಗೆ ಸೂಕ್ತ ಆದೇಶ ಹೊರಡಿಸಬೇಕು."
ಸರ್ಕಾರದ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್, ಒಂದು ವಾರದ ಗಡುವು ನೀಡಿ ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದೂಡಿದೆ.
ಹೈಕೋರ್ಟ್‌ನ ಈ ಆದೇಶದಿಂದಾಗಿ ತಮ್ಮ ಮಕ್ಕಳ ಶಾಲಾ ದಾಖಲಾತಿಯ ಆತಂಕದಲ್ಲಿದ್ದ ಲಕ್ಷಾಂತರ ಪೋಷಕರಿಗೆ ಸದ್ಯ ದೊಡ್ಡ ಸಮಾಧಾನ ಸಿಕ್ಕಂತಾಗಿದೆ.


