Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಎಂಗೆ ಬಿಗ್ ರಿಲೀಫ್ : ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ 

Advertisement
ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರದ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ 'ಭ್ರಷ್ಟಾಚಾರ ದರ ಪಟ್ಟಿ' ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಮತ್ತು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ಇಂದು ತಡೆ ನೀಡಿತು.

ಕಳೆದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಅವಿಧಿಯಲ್ಲಿ ಭ್ರಷ್ಟಾಚಾರದ ದರ ಪಟ್ಟಿ ಹೆಸರಿನಲ್ಲಿ ಬಿಜೆಪಿ ವಿರುದ್ಧ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಜನವರಿ ತಿಂಗಳಲ್ಲಿ ತಡೆ ನೀಡಿತ್ತು.

ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎಸ್.ಕೇಶವ ಪ್ರಸಾದ್ ಎಂಬವರು ಸಲ್ಲಿಸಿದ್ದ ಖಾಸಗಿ ದೂರಿನನ್ವಯ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಕೆಪಿಸಿಸಿ ಮತ್ತು ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕ ಸದಸ್ಯಪೀಠ, ಈ ಆದೇಶ ನೀಡಿದೆ. ಪ್ರತಿವಾದಿಯಾಗಿರುವ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ