ಮೈಸೂರು: ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ಬಸವಜಯಂತಿಯಂದು ನಾನು 2013 ಮೇ 13 ರಂದು ನಾನು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದೆ. ಬಸವಣ್ಣನವರು ಬೋಧಿಸಿದಂತೆ ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ.
ರಾಜಕೀಯ ಸ್ವಾತಂತ್ರ್ಯವು, ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ. ಶಿಕ್ಷಣ ಪಡೆದಾಗ ಮಾತ್ರ ಸಾಮಾಜಿಕ ಆರ್ಥಿಕ ಶಕ್ತಿ ದೊರಕಲು ಸಾಧ್ಯ ಎಂದರು.
ಈಗ ಜಾತಿ ಸಮೀಕ್ಷೆ ನಡೆಯುತ್ತಿದ್ದು, ಜಾತಿ ಸಮೀಕ್ಷೆ ವರದಿ ಬಂದ ನಂತರ ಚರ್ಚೆ ಮಾಡೋಣ ಎಂದರು.
ನಮ್ಮ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ.ಯಾರಿಗೂ ಅನ್ಯಾಯವಾಗಬಾರದು, ನೂರಕ್ಕೆ ನೂರು ಅಲ್ಲದಿದ್ದರೂ 99% ನ್ಯಾಯ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.


