ನವದೆಹಲಿ : ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿ, ಪೊಲೀಸ್ ಇಲಾಖೆ ಚಟುವಟಿಕೆಗಳಿಗೆ ಸಿಎಸ್‌ಆರ್ ನಿಧಿ ಬಳಕೆ, ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೀಕರಣ, ಕಾರಾಗೃಹಗಳ (ಜೈಲುಗಳ) ಆಧುನೀಕರಣ ಸೇರಿದಂತೆ ಕರ್ನಾಟಕ ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದರು.


