Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಸಿಲ ಬೇಗುದಿಗೆ ಬಸವಳಿದ ಜನ

Advertisement
ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಬಿಸಿಲ ಝಳ ಹೆಚ್ಚಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಬಿಸಿಲು ಹೆಚ್ಚಿರಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಕೂಡ ತಾಪಮಾನದಲ್ಲಿ ಸ್ವಲ್ಪ ಏರಿಕೆ ಕಂಡುಬರಲಿದೆ.

ಚಾಮರಾಜನಗರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆ ಇತ್ತು, ಬೀದರ್, ವಿಜಯಪುರ, ಗದಗ, ಹಾವೇರಿ, ರಾಯಚೂರು, ಧಾರವಾಡ, ದಕ್ಷಿಣ ಒಳನಾಡಿನ ಚಿತ್ರದುರ್ಗದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಇತ್ತು. ಕಳೆದ 24 ಗಂಟೆಗಳಲ್ಲಿ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ -2.6 ರಷ್ಟು ಕುಸಿತವಾಗಿದೆ.

ಗರಿಷ್ಠ ತಾಪಮಾನ ಕರಾವಳಿಯಲ್ಲಿ 36-38 ಡಿಗ್ರಿ ಸೆಲ್ಸಿಯಸ್​, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಗದಗ, ಕೊಪ್ಪಳ ಮತ್ತು ಹಾವೇರಿಯಲ್ಲಿ 30-33 ಡಿಗ್ರಿ ಸೆಲ್ಸಿಯಸ್, ರಾಯಚೂರು, ಬಾಗಲಕೋಟೆ ಮತ್ತು ಕಲಬುರಗಿಯಲ್ಲಿ 34-36 ಡಿಗ್ರಿ ಸೆಲ್ಸಿಯಸ್, ಬೆಂಗಳೂರು, ಚಿತ್ರದುರ್ಗ, ಹಾಸನ, ಚಿಂತಾಮಣಿ, ಮಡಿಕೇರಿ, ಶಿವಮೊಗ್ಗ ಮತ್ತು ಮೈಸೂರಿನಲ್ಲಿ 31-33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಇನ್ನು ಬೆಂಗಳೂರಿನಲ್ಲಿ ಬೆಳಗಿನ ಜಾವ ತಂಪಾದ ಗಾಳಿ ಬೀಸುತ್ತಿತ್ತು, ಗರಿಷ್ಠ ತಾಪಮಾನ ಕೊಂಚ ಕಡಿಮೆಯಾಗಿದೆ. ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ