Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ ಅತ್ಯಾಚಾರಿ ಏನ್ ಕೌಂಟರ್ ಪ್ರಕರಣ : ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ 

Advertisement
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಹತ್ಯೆಗೈದ ಆರೋಪಿ 'ಎನ್ ಕೌಂಟರ್' ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದ್ದು, ನಾಳೆ ಅಥವಾ ನಾಡಿದ್ದು ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಲಿದ್ದಾರೆ.

5 ವರ್ಷದ ಬಾಲಕಿಯನ್ನು ಹತ್ಯೆ ಮಾಡಿದ್ದ ಆರೋಪಿ ಪೊಲೀಸರ ಗುಂಡೇಟೆಗೆ ಬಲಿಯಾಗಿದ್ದಾನೆ. ಎದೆಗೆ ಗುಂಡು ತಗುಲಿದ್ದರಿಂದ ಆರೋಪಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ. ಪೊಲೀಸರ ಗುಂಡೇಟಿಗೆ ಬಿಹಾರ ಮೂಲದ ರಿತೇಶ್ ಕುಮಾರ್ ಬಲಿಯಾಗಿದ್ದಾನೆ.


ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವುದಾಗಿ ಕರೆದೊಯ್ದ ಆರೋಪಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದ್ದರು.


ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಮುಂದಾಗಿದ್ದ ವೇಳೆ ಫೈರಿಂಗ್ ಮಾಡಲಾಗಿತ್ತು. ಎದೆಗೆ ಗುಂಡು ತಗುಲಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ.


35 ವರ್ಷದ ರಿತೇಶ್ ಕುಮಾರ್ ಹಲವಾರು ತಿಂಗಳಿನಿಂದ ಹುಬ್ಬಳ್ಳಿಯಲ್ಲಿ ನೆಲೆಸಿದ್ದ. ದೃಶ್ಯಗಳನ್ನು ಆಧರಿಸಿ ತನಿಖೆ ನಡೆಸಲಾಗಿತ್ತು. ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್‌ಐ ಅನ್ನಪೂರ್ಣ ಅವರು ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಪಿಎಸ್‌ಐ ಅನ್ನಪೂರ್ಣ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ