LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣ: ಅಪರಾಧಿ ಗಿರೀಶ ಸಾವಂತನಿಗೆ ಜೀವಾವಧಿ ಶಿಕ್ಷೆ ತೀರ್ಪು

Advertisement

ಹುಬ್ಬಳ್ಳಿ: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ವಿಶ್ವನಾಥ ಉರ್ಫ ಗಿರೀಶ ಸಾವಂತನನ್ನು ದೋಷಿ ಎಂದು ತೀರ್ಮಾನಿಸಿರುವ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 45 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ವೀರಾಪುರ ಓಣಿಯ ಕರಿಯಮ್ಮನ ದೇವಸ್ಥಾನದ ಸಮೀಪ ವಾಸವಿದ್ದ 20 ವರ್ಷದ ಅಂಜಲಿ ಅಂಬಿಗೇರ ಅವರನ್ನು ಪ್ರೀತಿಸುತ್ತಿದ್ದ ಗಿರೀಶ, 2024ರ ಮೇ 15ರಂದು ಆಕೆಯ ಮನೆಗೆ ಅಕ್ರಮವಾಗಿ ನುಗ್ಗಿ ಚಾಕುವಿನಿಂದ ಮನಸೋಇಚ್ಛೆ ಇರಿದು ಭೀಕರವಾಗಿ ಹತ್ಯೆಗೈದು ತಲೆಮರೆಸಿಕೊಂಡಿದ್ದ. ಬಳಿಕ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಆತನನ್ನು ಸೆರೆಹಿಡಿದಿದ್ದರು.

ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶರಾದ ಪಲ್ಲವಿ ಬಿ.ಆರ್. ಅವರು, ಕೊಲೆ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ, ಸಾಕ್ಷ್ಯ ನಾಶಪಡಿಸಿದ ಆರೋಪಕ್ಕೆ ಮೂರು ವರ್ಷ ಹಾಗೂ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಅಪರಾಧಕ್ಕೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಇದರೊಂದಿಗೆ ವಿಧಿಸಲಾಗಿರುವ ಒಟ್ಟು 45 ಸಾವಿರ ರೂಪಾಯಿ ದಂಡದ ಮೊತ್ತದಲ್ಲಿ 43 ಸಾವಿರ ರೂಪಾಯಿಯನ್ನು ಮೃತ ಅಂಜಲಿ ಅವರ ಸಹೋದರಿ ಯಶೋಧಾ ಅವರಿಗೆ ಪರಿಹಾರವಾಗಿ ನೀಡಬೇಕು ಮತ್ತು ಉಳಿದ ಎರಡು ಸಾವಿರ ರೂಪಾಯಿಯನ್ನು ಸರ್ಕಾರಕ್ಕೆ ಜಮೆ ಮಾಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸಿಐಡಿ ವಿಶೇಷ ಸರ್ಕಾರಿ ಅಭಿಯೋಜಕ ಆರ್.ಕೆ. ಕಾಳೆ ಅವರು ವಾದ ಮಂಡಿಸಿದ್ದರು.

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
3BHK ಅಪಾರ್ಟ್‌ಮೆಂಟ್‌ಗೆ ಶಿಫ್ಟ್ ಆಗಲು 2,53,500 ರೂ. ಖರ್ಚು ಮಾಡಿದ ದಂಪತಿಆಶಾ ಕಾರ್ಯಕರ್ತೆಯರ ಗೌರವಧನ ₹15 ಸಾವಿರಕ್ಕೆ ಹೆಚ್ಚಿಸಲು ಆಗ್ರಹಿಸಿ ಪ್ರತಿಭಟನೆಬರೋಬ್ಬರಿ 19,934 ಕೋಟಿ ಮೊತ್ತದ ಐದು ಮಹತ್ವದ ಯೋಜನೆಗಳಿಗೆ ಅನುಮೋದನೆ ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣ: ಅಪರಾಧಿ ಗಿರೀಶ ಸಾವಂತನಿಗೆ ಜೀವಾವಧಿ ಶಿಕ್ಷೆ ತೀರ್ಪುರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಭಾರತೀಯ ಜನತಾ ಪಕ್ಷ ಮಾನ್ವಿ ಮಂಡಲ ವತಿಯಿಂದ ರಾಜ್ಯಪಾಲರಿಗೆ ಮನವಿಸಿಎಂ ಸೂಚನೆ ನೀಡಿದರೂ 20 ದಿನ ಕಳೆದರೂ ಇಳಿಕೆಯಾಗಿಲ್ಲ ಮೊಸರು ಬೆಲೆಮಹಿಳಾ ಕಾರ್ಮಿಕರ ಶ್ರಮಕ್ಕೆ ಬೆಲೆಯಿಲ್ಲವೇ? ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ.:ಸಂಗಮೇಶ್ ದುರದುಂಡಿನಾಳೆ ಕರ್ನಾಟಕ- ಬರೋಡಾ ಪಂದ್ಯ ಮುಂದಿನ ಹತ್ತು ವರ್ಷಗಳಲ್ಲಿ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕತೆ ವಾಸ್ತವ ಸ್ವರೂಪ : ಬಾಲಚಂದ್ರ ಜಾರಕಿಹೊಳಿ