LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಿಪ್ಪಾಣಿಯಲ್ಲಿ ಬೃಹತ್ ತಿರಂಗಾ ಯಾತ್ರೆ

Advertisement
      ----------------------------------------------------------------------ರಾರಾಜಿಸಿದ 900 ಮೀಟರ್ ಉದ್ದದ ತ್ರಿವರ್ಣ ಧ್ವಜ
ಚಿಕ್ಕೋಡಿ:ಭಾರತ ಸೇನೆಯು ಪಾಕಿಸ್ತಾನದ ವಿರುದ್ಧ ಕೈಗೊಂಡ ಅಪರೇಶನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ನಿಪ್ಪಾಣಿ ‌ ನಗರದಲ್ಲಿ ಬೃಹತ್ ತಿರಂಗಾ ಯಾತ್ರೆ‌ ಜರುಗಿತು.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-10-at-9.10.19-PM-1.mp4"][/video]

ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ, ಭಾರತಾಂಬೆ ಭಾವಚಿತ್ರಕ್ಕೆ ಸ್ಥಳೀಯ ವಿರೂಪಾಕ್ಷಲಿಂಗ ಸಮಾಧಿ ಮಠದ ಪ್ರಾಣಲಿಂಗ ಸ್ವಾಮೀಜಿ, ಆರುಣಾನಂದ ಸ್ವಾಮೀಜಿ, ಬಸವಪ್ರಸಾದ ಜೊಲ್ಲೆ ನಗರಸಭೆ ಅಧ್ಯಕ್ಷೆ ಸೋನಾಲಿ ಕೊಠಡಿಯಾ, ಉಪಾಧ್ಯಕ್ಷ ಸಂತೋಷ ಸಾಂಗಾವಕರ ಮತ್ತು ಗಣ್ಯರು ಪೂಜೆ ಸಲ್ಲಿಸಿ ಯಾತ್ರೆಗೆ ಚಾಲನೆ ನೀಡಿದರು.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-10-at-9.10.19-PM.mp4"][/video]

ರ್ಯಾಲಿಯಲ್ಲಿ ಭಾಗವಹಿಸಿದ್ದ ಜನರು ''ಭಾರತ್ ಮಾತಾ ಕಿ ಜೈ, ಜೈ ಜವಾನ್ ಜೈ ಕಿಸಾನ್, ಛತ್ರಪತಿ ಶಿವಾಜಿ ಮಹಾರಾಜ್ ಕಿ ಜೈ'' ಸೇರಿದಂತೆ ವಿವಿಧ ಘೋಷಣೆ ಕೂಗಿದರು. ಸುಮಾರು 900 ಮೀಟರ್ ಉದ್ದದ ತ್ರಿವರ್ಣ ಧ್ವಜ ಗಮನ ಸೆಳೆಯಿತು.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-10-at-9.10.18-PM.mp4"][/video]

ಜೊಲ್ಲೆ ಗ್ರುಪ್ ನ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ ಮಾತನಾಡಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕಿ ಶಶಿಕಲಾ ‌ ಜೊಲ್ಲೆಯವರ ಮಾರ್ಗದರ್ಶನದಲ್ಲಿ ಆಪರೇಷನ್ ಸಿಂಧೂರ ಸ್ಮರಣಾರ್ಥ ನಗರದಲ್ಲಿ ಸ್ಥಾರಕ ನಿರ್ಮಿಸಲಾಗುವುದು. ನಗರಸಭೆಯು ಸೈನಿಕರ ಸ್ಮಾರಕಕ್ಕಾಗಿ ಭೂಮಿ ಅನುಮೋದಿಸಿದೆ,'' ಎಂದರು.

ಯಾತ್ರೆಯು ಪ್ರಮುಖ ಬೀದಿಗಳಲ್ಲಿ ಸಾಗಿ ಛತ್ರಪತಿ ಶಿವಾಜಿ ಮಹಾರಾಜ ವೃತ್ತಕ್ಕೆ ತಲುಪಿ ಕೊನೆಗೊಂಡಿತು. ತಹಸೀಲ್ದಾರ್ ಮುಜಪರ್ ಬಳಿಗಾರ, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ನಾಯಿಕ, ತಳವಾರ, ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲಗೊಂಡ ಪಾಟೀಲ, ಉಪಾಧ್ಯಕ್ಷ ಪವನಕುಮಾರ ಪಾಟೀಲ, ನಿರ್ದೇಶಕರು, ನಗರಸಭೆ ಸದಸ್ಯರು, ಪದಾಧಿಕಾರಿಗಳು, ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ