Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಕಟ್ಟುನಿಟ್ಟಿನ ಕ್ರಮವಹಿಸಿ'

Advertisement
ಹುಕ್ಕೇರಿ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಈಗಾಗಲೇ ರೂಪಿಸಿರುವ ಯೋಜನೆಗಳನ್ನು ಜಾರಿಗೆ ತರಲು ಮುಖ್ಯೋಪಾಧ್ಯಾಯರು ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಡಿಡಿಪಿಐ ಸೀತಾರಾಮ ಆರ್.ಎಸ್. ಸೂಚಿಸಿದರು.
ತಾಲೂಕಿನ ನಿಡಸೋಸಿ ಎಸ್‌ಜೆಡಿ ಶಿಕ್ಷಣ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ತಯಾರಿಯ ನಿಮಿತ್ಯವಾಗಿ ಶುಕ್ರವಾರ ಆಯೋಜಿಸಿದ ಹುಕ್ಕೇರಿ ಮತ್ತು ಚಿಕ್ಕೋಡಿ ತಾಲೂಕಿನ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಮುಖ್ಯೋಪಾಧ್ಯಾಯರ ಸಭೆಯಲ್ಲಿ ಮಾತನಾಡಿದರು.

ಮಕ್ಕಳಿಗೆ ಮೊಬೈಲ್ ಬಳಸದಂತೆ ಈಗಾಗಲೇ ಸೂಚಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ರೂಪಿಸಿರುವ ಯೋಜನೆಗಳತ್ತ ಶಿಕ್ಷಕರ ಜೊತೆಗೆ ಮಕ್ಕಳ ಪಾಲಕರು ಹೆಚ್ಚಿನ ಮುತುವರ್ಜಿವಹಿಸಿದರೆ ಉತ್ತಮ ಫಲಿತಾಂಶ ಸುಲಭ ಸಾಧ್ಯ ಎಂದು ಅವರು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಾವತಿ ಪಾಟೀಲ,  ಜಿಲ್ಲಾ ಶಿಕ್ಷಣ ಅಧಿಕಾರಿ ಆರೀಪ್ ಬಿರಾದಾರ ಮಾತನಾಡಿ, ಕಾರ‍್ಯಾಗಾರದ ಮೂಲಕ ಪರೀಕ್ಷಾ ಫಲಿತಾಂಶ ಸುಧಾರಣೆ ಕ್ರಮಗಳ ಬಗೆಗೆ ವಿವರಿಸಿದರು.
ಡಯಟ ಪ್ರಾಂಶುಪಾಲ ಸಂಜೀವ ಹುಲ್ಲೋಳಿ, ಎಸ್‌ಜೆಡಿ ಪ್ರೌಢಶಾಲೆಯ ಖ್ಯೋಪಾಧ್ಯಾಯ ಸುನೀಲ ಗಲಗಲಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಎಂ.ಟಿ.ಜನಗೌಡರ, ಸವಿತಾ ಹಲಕಿ, ಸಂಪನ್ಮೂಲ ವ್ಯಕ್ತಿಗಳಾದ ಎಸ್.ಐ.ಅಮ್ಮಿನಭಾವಿ, ಸುನಿಲ ಖೋತ, ಭರತ ಪಾರ್ಥನಳ್ಳಿ, ಎಸ್‌ಎಸ್‌ಎಲ್‌ಸಿ ತಾಲೂಕು ನೋಡಲ್ ಅಧಿಕಾರಿ ಪ್ರಭು ಬಿರಡಿ ಸೇರಿದಂತೆ ಹುಕ್ಕೇರಿ ತಾಲೂಕಿನ 86 ಪ್ರೌಢಶಾಲೆಗಳ ಮತ್ತು ಚಿಕ್ಕೋಡಿ ತಾಲೂಕಿನ 75 ಪ್ರೌಡಶಾಲೆಗಳ ಮುಖ್ಯಸ್ಥರುಗಳು ಮತ್ತಿತರರು ಉಪಸ್ಥಿತರಿದ್ದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ