Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನಗೆ ಸದಾ ಯಶಸ್ಸು ಸಿಗುತ್ತದೆ. ಸ್ವಲ್ಪ ಶ್ರಮ ಬೇಕಾಗುತ್ತದೆ ಅಷ್ಟೇ : ಡಿ.ಕೆ.ಶಿವಕುಮಾರ್‌ 

Advertisement
ನವದೆಹಲಿ: ನಾವು ರಾಜಕಾರಣದಲ್ಲಿದ್ದೇವೆ, ರಾಜಕಾರಣ ಮಾಡಲೇಬೇಕು. ನನಗೆ ಸದಾ ಯಶಸ್ಸು ಸಿಗುತ್ತದೆ. ಸ್ವಲ್ಪ ಶ್ರಮ ಬೇಕಾಗುತ್ತದೆ ಅಷ್ಟೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾವು ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡಿಲ್ಲ.

ಪಕ್ಷ ತನ್ನದೇ ಆದ ಗುರಿ ಹೊಂದಿದ್ದು, ಪಕ್ಷದ ಯಶಸ್ಸು ಹಾಗೂ ಪಕ್ಷದ ಹಿತಾಸಕ್ತಿ, ಕರ್ನಾಟಕ ಹಾಗೂ ದೇಶದ ಹಿತದೃಷ್ಟಿ ಆಧಾರದ ಮೇಲೆ ನಮ್ಮ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಸೂಕ್ತ ಸಮಯದಲ್ಲಿ ತೀರ್ಮಾನ ಮಾಡುತ್ತಾರೆ. ಮಾಧ್ಯಮಗಳು ಹಾಗೂ ಬೇರೆಯವರು ಈ ಭೇಟಿಗೆ ಹೊಸ ರೂಪ, ಬೇರೆ ಬಣ್ಣ ನೀಡುತ್ತಿದ್ದೀರಿ. ನಮಗೆ ಇದರಲ್ಲಿ ವಿಶೇಷವಿಲ್ಲ ಎಂದರು.

ನಾನು ದೆಹಲಿಗೆ ಬಂದ ನಂತರ ಎಲ್ಲರನ್ನೂ ಭೇಟಿ ಮಾಡುತ್ತೇನೆ. ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್, ಸುರ್ಜೆವಾಲ, ಟಿ.ಬಿ. ಜಯಚಂದ್ರ ಸೇರಿದಂತೆ ಎಲ್ಲರನ್ನು ಭೇಟಿ ಮಾಡಿರುವೆ.

ರಾಜಕಾರಣಿಗಳು ಭೇಟಿಯಾದಾಗ ರಾಜಕಾರಣ ಚರ್ಚೆ ಮಾಡದೇ ಇರುತ್ತಾರಾ? ರಾಜಕೀಯ ಚರ್ಚೆ ಮಾಡುತ್ತೇವೆ. ಆದರೆ ಆ ಚರ್ಚೆಯ ವಿವರವನ್ನು ಮಾಧ್ಯಮಗಳ ಮುಂದೆ ಬಹಿರಂಗ ಪಡಿಸಲಾರೆ. ಕರ್ನಾಟಕದ ಹಿತ ಸೇರಿದಂತೆ ಅಸ್ಸಾಂ, ದೆಹಲಿ ಬಗ್ಗೆ ಚರ್ಚೆ ಮಾಡಿರುತ್ತೇವೆ ಎಂದಷ್ಟೇ ತಿಳಿಸಿದರು.

ಯತೀಂದ್ರ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಅವರು ನಮ್ಮ ಹೈಕಮಾಂಡ್ ಅಲ್ಲವೇ, ಅವರ ಮಾತನ್ನು ನಾವು ಸ್ವೀಕರಿಸಬೇಕು ಎಂದರು.

ಶಾಸಕರ ವಿದೇಶ ಪ್ರವಾಸ ವಿಚಾರವಾಗಿ, ನಾನು ಏನನ್ನೂ ಮಾತನಾಡುವುದಿಲ್ಲ. ಶಾಸಕರುಂಟು ಹಾಗೂ ಮುಖ್ಯಮಂತ್ರಿಗಳುಂಟು. ಸಿಎಂ ಅವರಿಗೆ ಯಾವ ಮಾರ್ಗದರ್ಶನ ನೀಡಿದ್ದಾರೋ ನನಗೆ ಗೊತ್ತಿಲ್ಲ. ಈ ವಿಚಾರ ನನ್ನ ಜತೆ ಚರ್ಚೆಯಾಗಿಲ್ಲ. ಈ ವಿಚಾರವಾಗಿ ನಾನು ಮಾಧ್ಯಮಗಳಿಂದ ತಿಳಿಯುತ್ತಿದ್ದೇನೆ ಹೊರತು, ಬೇರೆ ಯಾರು ಈ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ನಮ್ಮ ಸರ್ಕಾರದ ಸಾವಿರ ದಿನಗಳ ಸಾಧನೆ ಬಗ್ಗೆ ನಮಗೆ ಸಂತೋಷವಿದೆ. ಈ ಅಭೂತಪೂರ್ವ ಕ್ಷಣವನ್ನು ನಾವು ಸಂಭ್ರಮಿಸುತ್ತಿದ್ದು, ಈ ಸಂದರ್ಭದಲ್ಲಿ ಮತ್ತೊಂದು ಗ್ಯಾರಂಟಿ ಭೂಮಿ ಗ್ಯಾರಂಟಿಯನ್ನು ರಾಜ್ಯದ ಜನರಿಗೆ ನೀಡುತ್ತಿದ್ದೇವೆ.

ಭೂಮಿಯ ಹಕ್ಕು ಪತ್ರ ಇಲ್ಲದ ಲಕ್ಷಾಂತರ ಜನರಿಗೆ ನಾವು ಹಕ್ಕುಪತ್ರ, ಪಟ್ಟಾ ದಾಖಲೆ ನೀಡುತ್ತಿದ್ದೇವೆ. ಜತೆಗೆ ಜನರಿಗೆ ಪಕ್ಕಾ ಖಾತೆ ಹಂಚಿಕೆ ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳ ಹೊರತಾಗಿ ಇದು ನಮ್ಮ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದು ತಿಳಿಸಿದರು.

ಸಿಎಂ ಹಾಗೂ ಡಿಸಿಎಂ ನಡುವಣ ಸಂಘರ್ಷದಿಂದ ಜನರು ನರಳುವಂತಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ, ಸಂಘರ್ಷವಿರುವುದು ಬಿಜೆಪಿಯಲ್ಲೇ ಹೊರತು, ನಮ್ಮ ನಡುವೆಯಲ್ಲ. ನಾನು ಹಾಗೂ ಸಿಎಂ ಇಬ್ಬರೂ ಪಕ್ಷದ ತೀರ್ಮಾನದಂತೆ ನಡೆಯುತ್ತೇವೆ ಎಂದು ಹೇಳಿದ್ದಾರೆ. ಎಲ್ಲಾ ಚರ್ಚೆಗಳು ನಮ್ಮ ನಡುವೆ ಆಗಿದೆ. ಪಕ್ಷ ತೀರ್ಮಾನ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ