Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಅಲ್ಲ, ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ : ಶಾಸಕ ಯತ್ನಾಳ್

Advertisement
ದಾವಣಗೆರೆ : ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ. ನಾನು ಅಲ್ಲ, ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಹೊಸ ಪಕ್ಷ ಕಟ್ಟುವುದು ಅಷ್ಟು ಸುಲಭವಲ್ಲ.ಹೊಸ ಪಕ್ಷ ಕಟ್ಟಿ ಹಿಂದೂಗಳ ಮತ ವಿಭಜನೆ ಮಾಡಬಾರದು ಎಂಬುದು ನನ್ನ ಉದ್ದೇಶವಾಗಿದೆ ಎಂದರು.


ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂಬುದು ಸುಳ್ಳು. ನಾನು ಅಲ್ಲ ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗೋದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.


ಡಿಕೆಶಿ ಸಿಎಂ, ವಿಜಯೇಂದ್ರ ಡಿಸಿಎಂ ಅಂತ ದೆಹಲಿಯಲ್ಲಿ ಡೀಲ್ ಆಗಿತ್ತು ಡಿಕೆಶಿ ಸಿಎಂ, ವಿಜಯೇಂದ್ರ ಉಪಮುಖ್ಯ ಮಂತ್ರಿ ಅಂತ ದೆಹಲಿಯಲ್ಲಿ ಡೀಲ್ ಆಗಿತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.


ದಾವಣಗೆರೆಯಲಿ ಮಾತನಾಡಿದ ಅವರು, ನಾನು ಹೈಕಮಾಂಡ್​ಗೆ ಕ್ಷಮೆ ಕೇಳಿಲ್ಲ. ಯಾವುದೂ ಪತ್ರ ಕೂಡ ಬರೆದಿಲ್ಲ, ಕೈಮುಗಿದಿಲ್ಲ. ನನಗೆ ಅದರ ಅವಶ್ಯಕತೆ ಇಲ್ಲ.


ಅಲ್ಲದೆ ಒಂದು ಪಕ್ಷದ ರಾಜ್ಯಾಧ್ಯಕ್ಷ ಬರುತ್ತಾರೆ ಎಂದರೆ ಕನಿಷ್ಠ ಸಾವಿರಾರು ಜನರಾದರೂ ಸೇರಬೇಕು. ಆದರೆ, ಬಿಜೆಪಿ ನಡೆಸಿದ ಈ ಜನಾಕ್ರೋಶ ಯಾತ್ರೆಯಲ್ಲಿ 800ರಿಂದ 1000 ಜನ ಅಷ್ಟೇ ಸೇರಿದ್ದರು.


ನಾನು ಯಾವುದಾದರೊಂದು ಕಾರ್ಯಕ್ರಮಕ್ಕೆ ತೆರಳಿದರೆ ಏನಿಲ್ಲವೆಂದರೂ 20 ಸಾವಿರ ಜನ ಸೇರುತ್ತಾರೆ. ಬಿಜೆಪಿ ಹೊಂದಾಣಿಕೆ ರಾಜಕಾರಣದಿಂದ ರಾಜ್ಯದ ಜನರಿಗೆ ಮೋಸ ಆಗುತ್ತಿದೆ ಎಂದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ