Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ : ಆರ್ ಅಶೋಕ್ 

Advertisement
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ. ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಮಹಿಳೆಯರು ಕೆಲಸಕ್ಕೆ ಹೋದರೆ ಮನೆಗೆ ವಾಪಸ್ ಬರುವ ಗ್ಯಾರಂಟಿಯೇ ಇಲ್ಲ ಎಂದು ಪ್ರತಿಪಕ್ಷ ನಾಯಕರಾದ ಆರ್ ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಶಿವರಾಮೇಗೌಡ ಎನ್ನುವ ವ್ಯಕ್ತಿ ಹೇಳುತ್ತಾನೆ.. ಮೋದಿಗೆ ಹೇಳಿ ಜೆಡಿಎಸ್ -ಬಿಜೆಪಿ ಭಾಗ ಮಾಡಿಬಿಟ್ಟರೆ ನಮಗೆ ಒಳ್ಳೆಯದು. ಇವರೆಂಥಾ ಚಂಡಾಳರು ಎನ್ನುವುದು ಇದರಿಂದ ಗೊತ್ತಾಗುತ್ತದೆ. ಮುಂದಿನ ವಿಧಾನಸಭೆ ಚುನಾವಣೆವರೆಗೂ ಇವರು ಒಂದಾಗಿದ್ದರೆ ನಮಗೆ ಉಳಿಗಾಲ ಇಲ್ಲ ಎನ್ನುವುದು ಅವರ ಹೆದರಿಕೆ ಎಂದು ಅವರು ಲೇವಡಿ ಮಾಡಿದರು.

ಇವರು ಕುಮಾರಸ್ವಾಮಿ ಅವರ ಬೆನ್ನಿಗೆ ಚೂರಿ ಹಾಕಿದರು ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಶೋಕ್ ಅವರು; ಕೆಲಸ ಆಗಬೇಕಾದರೆ ಕೈ ಎತ್ತು. ಕೆಲಸ ಆದ ಮೇಲೆ ಚೂರಿ ಹಾಕು. ಇದೇ ಕಾಂಗ್ರೆಸ್ ನೀತಿ. ನಾನು ಹದಿನಾಲ್ಕು ತಿಂಗಳು ದುಷ್ಟರ ಸಹವಾಸ ಮಾಡಿದ್ದೆ, ಅವರನ್ನು ನನ್ನನ್ನು ಕ್ಲರ್ಕ್, ಜವಾನನ ರೀತಿ ನಡೆಸಿಕೊಂಡರು ಎಂದರು.

ಕಾಂಗ್ರೆಸ್ ಸರಕಾರ ಎಲ್ಲ ಕಡೆ ಲೂಟಿ ಮಾಡುತ್ತಿದೆ. ಈಗ ಬಿಡಿಎ ಕಾಂಪ್ಲೆಕ್ಸ್ ಗಳನ್ನು ಮಾರಾಟಕ್ಕೆ ಇಟ್ಟಿದೆ. ಹಿಂದೆ ಲಕ್ಷ್ಮಣರಾವ್ ಅವರಂಥ ಮಹಾನುಭಾವರು ಇವನ್ನೆಲ್ಲ ಕಾಪಾಡಿಕೊಂಡು ಬಂದಿದ್ದರು. ಸರ್ಕಾರದಲ್ಲಿ ಹಣ ಇಲ್ಲ. ಅವರ ವರಿಷ್ಠರಿಗೆ ಕಪ್ಪ ಕೊಡಲು ಇಲ್ಲಿ ಲೂಟಿ ಮಾಡಲು ಹೊರಟಿದ್ದಾರೆ ಎಂದು ಅಶೋಕ್ ಟೀಕಿಸಿದರು.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ