ಕೋಲಾರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬದಲಾಗುತ್ತಿರುವ ಪ್ರಮುಖ ರಾಜಕೀಯ ಬೆಳವಣಿಗೆಗಳು ಹಾಗೂ ಪ್ರಸ್ತುತ ವಿದ್ಯಮಾನಗಳ ಕುರಿತು ಮಾಧ್ಯಮಗಳೊಂದಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ಪಷ್ಟಪಡಿಸಿದ್ದಾರೆ
ಕೋಲಾರ (Kolar) ನಗರದಲ್ಲಿ ಆಯೋಜಿಸಲಾಗಿದ್ದ ಖ್ಯಾತ ಆರ್.ಎಲ್. ಜಾಲಪ್ಪ ಆಸ್ಪತ್ರೆಯ ಸಂಸ್ಥಾಪನಾ ದಿನಾಚರಣೆ ಹಾಗೂ ಡೇಕೇರ್ ವಾರ್ಡ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರು ಆಗಮಿಸಿದ್ದರು.
ಈ ಸಂದರ್ಭದಲ್ಲಿ ಸುದ್ದಿಗಾರರು ರಾಜ್ಯ ರಾಜಕಾರಣದ ಕುರಿತು ಪ್ರಶ್ನೆಗಳನ್ನು ಕೇಳಿದಾಗ, ತಾವು ಸದ್ಯಕ್ಕೆ ಮೀಡಿಯಾದವರ (Media) ಜೊತೆ ಈ ಬಗ್ಗೆ ಚರ್ಚಿಸುವುದಿಲ್ಲ ಎಂದು ನಯವಾಗಿ ನುಣುಚಿಕೊಂಡರು.


