LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಸಂಬಂಧವಿಲ್ಲ : ಸಿದ್ದರಾಮಯ್ಯ 

Advertisement

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ (Sting operation) ವಿಡಿಯೋಗೆ ತಮ್ಮ ಹೆಸರನ್ನು ಜೋಡಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ವಿಡಿಯೋ ಪ್ರಕಟಣೆ ಮತ್ತು ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಸ್ಟಿಂಗ್ ಆಪರೇಷನ್ ವಿಡಿಯೋಗೂ ತಮಗೂ ಯಾವುದೇ ಸಂಬಂಧವಿಲ್ಲ. ರಾಜಕೀಯ ದುರುದ್ದೇಶದಿಂದ ತಮ್ಮ ಚಾರಿತ್ರ್ಯಹನನ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಯುತ್ತಿರುವುದನ್ನು ಗಮನಿಸಿದ್ದೇನೆ.

ಇದು ಸ್ಪಷ್ಟವಾಗಿ ರಾಜಕೀಯ ದುರುದ್ದೇಶದಿಂದ ನನ್ನ ಚಾರಿತ್ರ್ಯಹನನ ಮಾಡುವ ಪ್ರಯತ್ನದಂತೆ ಕಾಣುತ್ತಿದೆ.ಈ ಸ್ಟ್ರಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲದೆ ಇದ್ದರೂ ಇದನ್ನು ಬಳಸಿಕೊಂಡು ಕೆಲವು ಕಿಡಿಗೇಡಿಗಳು ನನ್ನ ವಿರುದ್ದ ಅಪಪ್ರಚಾರದಲ್ಲಿ ತೊಡಗಿದ್ದಾರೆ. 

ಈ ಹಿನ್ನೆಲೆಯಲ್ಲಿ ನನ್ನ ಹೆಸರಿನ ಉಲ್ಲೇಖ ಇರುವ ಈ ಸ್ಟ್ರಿಂಗ್ ಆಪರೇಷನ್ ವಿಡಿಯೋ ಅನ್ನು ಯಾವುದೇ ಪತ್ರಿಕೆ, ಚಾನೆಲ್ ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ಇಲ್ಲವೇ ಪ್ರಸಾರ ಮಾಡದಂತೆ ತಡೆನೀಡಬೇಕು ಎಂದು ಕೋರಿ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇನೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐದು ವರ್ಷ ಪ್ರೀತಿ, ಮತ್ತೊಬ್ಬನ ಜೊತೆ ಮದುವೆ ನಿಶ್ಚಯ : ಪ್ರೇಯಸಿಯನ್ನ ಕೊಂದ ಪ್ರೇಮಿ ನಂದಿಹಾಳ ಹಳ್ಳಕ್ಕೆ ನೀರು ಹರಿಸುವಂತೆ ಗ್ರಾಮಸ್ಥರಿಂದ ತಹಶೀಲ್ದಾರ್ ರವರಿಗೆ ಮನವಿಬಾಂಗ್ಲಾದೇಶ- ಆಪಘಾನಿಸ್ತಾನ್ ಟೆಸ್ಟ್ ಡ್ರಾ ದಲ್ಲಿ ಅಂತ್ಯ ಕೇಂದ್ರ ಸಚಿವ ಸ್ಥಾನಕ್ಕೆ ಎಲ್. ಮುರುಗನ್ ರಾಜೀನಾಮೆ ಘೋಷಣೆಸಿಡಿ ತೋರಿಸಿ ಸಿದ್ದರಾಮಯ್ಯರಿಂದ ರಾಜೀನಾಮೆ ಪಡೆಯಲಾಗಿದೆ: ಯತ್ನಾಳ್ ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಸಂಬಂಧವಿಲ್ಲ : ಸಿದ್ದರಾಮಯ್ಯ ಸೋಲಿನಿಂದ ಪಾರಾಗಲು ಕರ್ನಾಟಕ ಹೋರಾಟ ಚಿತ್ರದುರ್ಗದ ಉಕ್ಕಿನ ಕೋಟೆ ರಕ್ಷಿಸಿದ ವೀರ ಮದಕರಿ ನಾಯಕ: ಶಿವರಾಜ ಸಾಹುಕಾರವ್ಯಕ್ತಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ : ಬರೋಬ್ಬರಿ 1.31 ಕೋಟಿ ರೂಪಾಯಿ ವಂಚನೆಬೆಳಗಾವಿ, ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ಕಿಚ್ಚು : ಹೆದ್ದಾರಿ ಬಂದ್ ಮಾಡಿ ಆಕ್ರೋಶ