ಬೆಂಗಳೂರು : ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಖರೀದಿ-ಮಾರಾಟದ ವ್ಯವಹಾರ ರದ್ದಾದರೆ, ಮುಂಗಡವಾಗಿ ಪಾವತಿಸಿದ ಮುದ್ರಾಂಕ ಹಾಗೂ ನೋಂದಣಿ ಶುಲ್ಕವನ್ನು ಮರುಪಾವತಿಸಲೇಬೇಕು.
ವ್ಯವಹಾರವೇ ರದ್ದಾಗಿರುವಾಗ ಸಾರ್ವಜನಿಕರ ಹಣವನ್ನು ಸರ್ಕಾರ ತನ್ನ ಬಳಿ ಇಟ್ಟುಕೊಳ್ಳುವ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಖರೀದಿ-ಮಾರಾಟದ ವ್ಯವಹಾರ ರದ್ದಾದರೆ, ಮುಂಗಡವಾಗಿ ಪಾವತಿಸಿರುವ ಮುದ್ರಾಂಕ ಹಾಗೂ ನೋಂದಣಿ ಶುಲ್ಕವನ್ನು ಮರುಪಾವತಿಸಲು ಸಲ್ಲಿಸುವ ಮನವಿಯನ್ನು ನಿರಾಕರಿಸುವಂತಿಲ್ಲ. ವ್ಯವಹಾರವೇ ರದ್ದಾಗಿರುವಾಗ ಸಾರ್ವಜನಿಕರ ಹಣವನ್ನು ಸರ್ಕಾರ ತನ್ನ ಬಳಿ ಇಟ್ಟುಕೊಳ್ಳುವ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಆಸ್ತಿ ಖರೀದಿದಾರರು ಹಾಗೂ ಮಾರಾಟಗಾರರಿಗೆ ಮಹತ್ವದ ಪರಿಹಾರ ನೀಡುವ ತೀರ್ಪಿನಲ್ಲಿ ಕರ್ನಾಟಕ ಹೈಕೋರ್ಟ್, ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ವ್ಯವಹಾರ ರದ್ದಾದರೆ, ಮುಂಗಡವಾಗಿ ಪಾವತಿಸಿರುವ ಮುದ್ರಾಂಕ ಹಾಗೂ ನೋಂದಣಿ ಶುಲ್ಕವನ್ನು ಮರುಪಾವತಿಸಲೇಬೇಕು ಎಂದು ಸ್ಪಷ್ಟಪಡಿಸಿದೆ.
ವಿಳಂಬದ ನೆಪವೊಡ್ಡಿ ಮರುಪಾವತಿ ಅರ್ಜಿಯನ್ನು ತಿರಸ್ಕರಿಸಿದ್ದ ಜಿಲ್ಲಾ ನೋಂದಣಾಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಬೆಳಗಾವಿಯ ಗೋಪಾಲರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಗದಮ್ ಅವರ ಪೀಠ ಈ ಮಹತ್ವದ ಆದೇಶ ನೀಡಿದೆ.
ಜೊತೆಗೆ, ಅರ್ಜಿದಾರರ ಮನವಿಯನ್ನು ಮುಂದಿನ ಎಂಟು ವಾರಗಳೊಳಗೆ ಮರು ಪರಿಶೀಲಿಸಿ ಸೂಕ್ತ ಆದೇಶ ಹೊರಡಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.


