Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿ

37 ವರ್ಷ ಸೇವೆ ಸಲ್ಲಿಸಿ, ನೂರಾರು ವಿದ್ಯಾರ್ಥಿಗಳ ಬದುಕು ರೂಪಿಸಿದ ಶಿಕ್ಷಕ ಸಿ.ಎಲ್. ಹೂಗಾರ ಭಾವುಕ ಬೀಳ್ಕೊಡುಗೆ

Advertisement


ಕಲಾದಗಿ: ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ  ಸಿ.ಎಲ್. ಹೂಗಾರ ಅವರು 37 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ್ದು, ಭಾನುವಾರ  ಹೃದಯ ಸ್ಪರ್ಶಿ ಬೀಳ್ಕೊಡುಗೆ ಹಾಗೂ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು.
 ಸುಮಾರು 37 ವರ್ಷಗಳ ಕಾಲ ಶಾಲೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಸಿ.ಎಲ್. ಹೂಗಾರ ಶೈಕ್ಷಣಿಕ ಸಾಧನೆ, ಶಿಸ್ತು, ಕರ್ತವ್ಯ ನಿಷ್ಠೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ನೀಡಿದ ಅಪೂರ್ವ ಪೂರ್ವ ಕೊಡುಗೆಯನ್ನು ಸ್ಮರಿಸಿಲಾಯಿತು. ಸಮಾರಂಭದಲ್ಲಿ ಶಿಕ್ಷಕರು ಪಾಲಕರು ಹಾಗೂ ಗಣ್ಯರು ಅವರ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. 
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಶ್ರಾಂತ ಉಪನಿರ್ದೇಶಕ ಎಚ್.ಜಿ. ಮಿರ್ಜಿ ಮಾತನಾಡಿ, ಸಿ.ಎಲ್. ಹೂಗಾರ ಅವರು 37 ವರ್ಷಗಳ ಕಾಲ ಶಿಕ್ಷಕರಾಗಿ ನೂರಾರು ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿದ್ದಾರೆ. ಶಿಕ್ಷಕರು ತಮಗೆ ದೊರೆತ ಅವಕಾಶದಲ್ಲಿ ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು ಎಂದು ಶ್ಲಾಘಿಸಿದರು.
ಬಿ.ಬಿ.ಮೆಳ್ಳಿಗೇರಿ ಮಾತನಾಡಿ, ವಿವಿಧ ಶಾಲೆಯಲ್ಲಿ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳ ಮನಸ್ಸಿನಲ್ಲಿ ಅಳಿಸಲಾಗದ ಗುರುತು ಮೂಡಿಸಿರುವ ಸಿ.ಎಲ್. ಹೂಗಾರ ಅವರ ಸರಳತೆ, ಸೇವಾ ಮನೋಭಾವ ಹಾಗೂ ಶಿಕ್ಷಣದ ಮೇಲಿನ ಬದ್ಧತೆ ಪ್ರತಿಯೊಬ್ಬ ಶಿಕ್ಷಕರಿಗೆ ಮಾದರಿಯಾಗಿದೆ. ಅವರು ನಡೆದಿರುವ ಆದರ್ಶದ ಹಾದಿ ಮುಂದಿನ ಪೀಳಿಗೆಯ ಶಿಕ್ಷಕರಿಗೆ ಪ್ರೇರಣೆಯಾಗಲಿದೆ ಎಂದು ಶುಭ ಹಾರೈಸಿದರು.
ವಿದ್ಯಾರ್ಥಿನಿ ಜಾನು ಮಾಳೇದ ಮಾತನಾಡಿ, ಶಾಲೆಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಹೂಗಾರ ಶಿಕ್ಷಕರ  ಸೇವೆ ಅನನ್ಯವಾಗಿದೆ, ಅವರ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ ಎಂದರು.
ಸನ್ಮಾನ ಸ್ವೀಕರಿಸಿ ಶಿಕ್ಷಕ ಸಿ.ಎಲ್. ಹೂಗಾರ ಮಾತನಾಡಿದರು, ಶಿಕ್ಷಣ ಇಲಾಖೆಯಲ್ಲಿ ಸುದೀರ್ಘವಾಗಿ 37 ವರ್ಷಗಳು ನನ್ನ ಜೀವನದ ಅತ್ಯಂತ ಅಮೂಲ್ಯ ಮತ್ತು ಮರೆಯಲಾಗದ ಕ್ಷಣಗಳಾಗಿವೆ, ವಿದ್ಯಾರ್ಥಿಗಳು, ಸಹೋದ್ಯೋಗಿಗಳು, ಪಾಲಕರಿಂದ ದೊರೆತ ಪ್ರೀತಿ, ವಿಶ್ವಾಸ ಮತ್ತು ಸಹಕಾರ ನನ್ನ ಬದುಕಿನ ದೊಡ್ಡ ಸಂಪತ್ತು, ಈ ಪ್ರೀತಿಯನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದರು.
ವಿಶ್ರಾಂತ ಡಿವೈ ಪಿ ಸಿ ಸಿ.ಆರ್.ಓಣಿ, ಉಪಾಧ್ಯಕ್ಷೆ ಲಕ್ಷ್ಮಿ ಮಾದರ, ಮುಖ್ಯಶಿಕ್ಷಕಿಯರಾದ ಎ.ಜಿ.ಕಟಗೇರಿ, ಎ.ಬಿ.ಗುರುವಿನ, ಹಿರಿಯರಾದ ಅಶೋಕ ಉಮದಿ ಸಂಗಪ್ಪ ಛಬ್ಬಿ, ಮಲ್ಲಪ್ಪ ಜಮಖಂಡಿ, ಎಸ್.ಆರ್. ಕನಕಪ್ಪನವರ, ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಬಾಬು ತೇಲಿ,ಭೀಮಸಿ ಪೂಜಾರಿ, ಅಬ್ದುಲ್ ಖಾನ್ ಪಠಾಣ, ಎಸ್ಡಿ ಎಂ ಸಿ ಸದಸ್ಯರಾದ ಖಾಜಿ, ದುಂಡಪ್ಪ ನಾಯ್ಕರ ಇದ್ದರು.
ಕಾರ್ಯಕ್ರಮವನ್ನು ಶಾಲಾ ಸಹಶಿಕ್ಷಕಿ ಎನ್.ಬಿ. ಮೈಸೂರ ನಿರೂಪಿಸಿದರು, ಶಿಕ್ಷಕ ಎಸ್.ಬಿ.ಬಾಗೇವಾಡಿ ಸ್ವಾಗತಿಸಿ, ವಂದಿಸಿದರು.    

ವರದಿ : ಬಸವರಾಜ ಪೂಜಾರಿ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್