Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರು, ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಮೆಟ್ಟಿನಲ್ಲಿ ಹೊಡೆಯುತ್ತೇನೆ : ಲಕ್ಷ್ಮಣ್ ಸವದಿ ಎಚ್ಚರಿಕೆ 

Advertisement

ಬೆಳಗಾವಿ: ರೈತರು ಮತ್ತು ನನ್ನ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸುಮ್ಮನಿರುವುದಿಲ್ಲ. ಅಂತಹ ಪ್ರಸಂಗ ಬಂದರೆ ಮೆಟ್ಟಿನಲ್ಲಿ ಹೊಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೇಲಸಂಗ ಗ್ರಾಮದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ್ ಸವದಿ ಅವರು ನೀಡಿದ ಈ ಹೇಳಿಕೆ ಭಾರಿ ವೈರಲ್ ಆಗಿದೆ.

ತಮ್ಮ ವಿರುದ್ಧ ನಡೆಯುತ್ತಿರುವ ವೈಯಕ್ತಿಕ ಟೀಕೆಗಳಿಗೆ ತಿರುಗೇಟು ನೀಡಿದ ಸವದಿ, ಲಕ್ಷ್ಮಣ್ ಸವದಿಯನ್ನು ಟ್ರ್ಯಾಕ್ಟರ್ ಹೊಡೆಯಲು ಕಳಿಸುತ್ತೇವೆ ಎಂದು ಕೆಲವರು ಮಾತನಾಡುತ್ತಿದ್ದಾರೆ.

ಹೌದು, ನಾನೊಬ್ಬ ರೈತನ ಹೊಟ್ಟೆಯಲ್ಲಿ ಹುಟ್ಟಿದ್ದೇನೆ. ಎತ್ತು ಹೊಡೆಯುತ್ತೇನೆ, ಟ್ರ್ಯಾಕ್ಟರ್ ಕೂಡ ಹೊಡೆಯುತ್ತೇನೆ. ಆದರೆ, ಪ್ರಸಂಗ ಬಂದರೆ ಅನ್ಯಾಯ ಮಾಡಲು ಬಂದವನಿಗೆ ಮೆಟ್ಟಿನಿಂದಲೂ ಹೊಡೆಯುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಐಎಎಸ್, ಐಪಿಎಸ್ ಓದಿಲ್ಲ. ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಓದಿ, ಕಬಡ್ಡಿ ಆಡಿಕೊಂಡು, ದನ ಕಾಯ್ದುಕೊಂಡು ಬೆಳೆದವ. ನನ್ನ ಕ್ಷೇತ್ರದ 1,31,000 ಜನರೇ ನನಗೆ ರಕ್ಷಾಕವಚವಾಗಿ ನಿಂತಿದ್ದಾರೆ. ರೈತರ ಕುಲದಲ್ಲಿ ಹುಟ್ಟಿದ ನನಗೆ ಅವರ ಸ್ವಾಭಿಮಾನ ಮತ್ತು ಬೆಳೆದ ಬೆಳೆಗೆ ಮೋಸವಾಗುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಜ್ಯದಲ್ಲೇ ಅತಿ ಹೆಚ್ಚು, ಅಂದರೆ ವಾರ್ಷಿಕ 76 ಲಕ್ಷ ಟನ್ ಕಬ್ಬು ಬೆಳೆಯುವ ಹೆಮ್ಮೆಯ ತಾಲೂಕು ನಮ್ಮದು. ಅಮ್ಮಾಜೇಶ್ವರಿ-ಬಸವೇಶ್ವರ ಏತ ನೀರಾವರಿ ಯೋಜನೆ ಪೂರ್ಣಗೊಂಡ ಬಳಿಕ ಮುಂದಿನ ಕೇವಲ ಎರಡು ವರ್ಷಗಳಲ್ಲಿ ಇದು 1 ಕೋಟಿ ಟನ್ ಕಬ್ಬು ಬೆಳೆಯುವ ನಾಡಾಗಿ ಹೊರಹೊಮ್ಮಲಿದೆ ಎಂದರು.

ರೈತರು ಬೆವರು ಹರಿಸಿ ಬೆಳೆದ ಕಬ್ಬನ್ನು ಕಾರ್ಖಾನೆಗೆ ತಂದಾಗ ನಡೆಯುತ್ತಿರುವ ಮೋಸದ ಬಗ್ಗೆ ಗೊತ್ತಾಗಿದೆ.ಒಂದು ಟ್ರಿಪ್‌ಗೆ ಎರಡು-ಮೂರು ಟನ್ ತೂಕದ ಕಬ್ಬು ಕದ್ದು ರೈತರ ರಕ್ತ ಹೀರುವವರಿಗೆ ಒಂದು ಎಕರೆ ಕಬ್ಬು ಬೆಳೆಯಲು ರೈತರು ಪಡುವ ಕಷ್ಟವೇನು ಎಂಬುದು ತಿಳಿದಿಲ್ಲ. ಇಂತಹ ಮೋಸದಾಟಗಳನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ಕಾರ್ಖಾನೆಗಳು ಹಾಗೂ ದಲ್ಲಾಳಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ