Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀವು ಬೇಡ ಅಂದರೂ ಒಳ ಮೀಸಲಾತಿ ನಾವು ಜಾರಿ ಮಾಡುತ್ತೇವೆ : ಸಿದ್ಧರಾಮಯ್ಯ

Advertisement
ಬೆಂಗಳೂರು : ಒಳ ಮೀಸಲಾತಿ ಬಗ್ಗೆ ಅನುಮಾನ ಪಡುವ ಅಗತ್ಯವಿಲ್ಲ, ಜಾರಿ ಮಾಡಿಯೇ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಭರವಸೆ ನೀಡಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 118 ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ಮಾಡುವುದು ಖಚಿತ.


ನೀವು ಬೇಡ ಅಂದರೂ ನಾವು ಜಾರಿ ಮಾಡುತ್ತೇವೆ. ಸುಪ್ರೀಂಕೋರ್ಟ್ ಆದೇಶವನ್ನು ನಾವು ಶತಪ್ರತಿಶತ ಪಾಲಿಸುತ್ತೇವೆ. ನಾಗಮೋಹನ್ ದಾಸ್ ಅವರು ಎರಡು ತಿಂಗಳ ಕಾಲಾವಧಿ ಕೇಳಿದ್ದಾರೆ, ನಾವು ಕೊಟ್ಟಿದ್ದೇವೆ. ಬಳಿಕ ಯಾರಿಗೂ ಅನ್ಯಾಯ ಆಗದಂತೆ ಜಾರಿ ಮಾಡುತ್ತೇವೆ ಎಂದು ಹೇಳಿದರು.


ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಪ್ರೇಮಿ, ಸಾಮಾಜಿಕ ನ್ಯಾಯದ ಪರವಾಗಿದ್ದವರು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ಇರುವವರೆಗೂ ಮೀಸಲಾತಿ ಇರಬೇಕು ಎಂದು ಸ್ಪಷ್ಟವಾದ ನಿಲುವು ಹೊಂದಿದ್ದರು.


ಪ್ರಧಾನಿ ನರೇಂದ್ರ ಮೋದಿಯವರು EWS ಹೆಸರಲ್ಲಿ ಶೇ10 ಮೀಸಲಾತಿ ಕಲ್ಪಿಸಿದ ಬಳಿಕ ಎಲ್ಲರೂ ಮೀಸಲಾತಿ ಫಲಾನುಭವಿಗಳೇ ಆಗಿಬಿಟ್ಟಿದ್ದಾರೆ. ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಸಿಎಂ ಅಭಿಪ್ರಾಯಪಟ್ಟರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ