LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿಟ್ಟು ತ್ಯಾಗ ಮಾಡಿದ್ರೆ ಮುಂದೆ ಸಿಎಂ ಆಗ್ತೀಯಾ : ಸಚಿವ ವಿಜಯಾನಂದ ಕಾಶಪ್ಪನವರ್‌ಗೆ ಸಿದ್ದನಕೊಳ್ಳ ಶ್ರೀಗಳ ಸ್ಫೋಟಕ ಭವಿಷ್ಯ

Advertisement

ಬಾಗಲಕೋಟೆ : ಜಿಲ್ಲೆಯ ಇಲಕಲ  ತಾಲೂಕಿನ ಸುಕ್ಷೇತ್ರ ಸಿದ್ದನಕೊಳ್ಳ ಶ್ರೀಮಠಕ್ಕೆ ಭೇಟಿ ನೀಡಿದ್ದ ನೂತನ ಸಚಿವ ವಿಜಯಾನಂದ ಕಾಶಪ್ಪನವರಗೆ ಮಠದ ಪೀಠಾಧಿಪತಿ ಡಾ: ಶಿವಕುಮಾರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ "ಸಿಟ್ಟನ್ನು ತ್ಯಾಗ ಮಾಡಿದರೆ ನೀನು ರಾಜ್ಯದ ಮುಖ್ಯಮಂತ್ರಿ ಆಗುತ್ತೀಯಾ" ಎಂದು ಸ್ವಾಮೀಜಿ ಆಶೀರ್ವದಿಸಿದ್ದಾರೆ ಈ ಭವಿಷ್ಯವು ಉತ್ತರ ಕರ್ನಾಟಕ ಹಾಗೂ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ನೂತನವಾಗಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ ಜಿಲ್ಲೆ ಇಳಕಲ ತಾಲೂಕಿನ ಪ್ರಸಿದ್ಧ ಸಿದ್ದನಕೊಳ್ಳ ಶ್ರೀಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ವೇಳೆ ಮಠದ ಪೀಠಾಧಿಪತಿ ಶಿವಕುಮಾರ ಸ್ವಾಮೀಜಿ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಭವಿಷ್ಯವೊಂದನ್ನು ನುಡಿದಿದ್ದಾರೆ.

ನಿನ್ನ ಕೋಪವನ್ನು (ಸಿಟ್ಟು) ಸಂಪೂರ್ಣವಾಗಿ ತ್ಯಾಗ ಮಾಡಿದರೆ ನೀನು ಮುಂದೆ ರಾಜ್ಯದ ಮುಖ್ಯಮಂತ್ರಿ ಆಗುತ್ತೀಯ  ಎಂದು ಶಿವಕುಮಾರ ಶ್ರೀಗಳು ನೂತನ ಸಚಿವರಿಗೆ ಆಶೀರ್ವದಿಸಿದ್ದಾರೆ. ಸಚಿವ ವಿಜಯಾನಂದ ಕಾಶಪ್ಪನವರ ಅವರು ತಮ್ಮ ತಾಯಿ, ಮಾಜಿ ಶಾಸಕಿ ಗೌರಮ್ಮ ಕಾಶಪ್ಪನವರ ಅವರೊಂದಿಗೆ ಮಠಕ್ಕೆ ಆಗಮಿಸಿ ಸಿದ್ದಪ್ಪಜ್ಜನ ಪವಿತ್ರ ಗದ್ದುಗೆಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಕಳೆದ 2023ರಲ್ಲಿ ನೀನು ಶಾಸಕನಾಗಿ ಸಚಿವನಾಗುತ್ತೀಯಾ ಎಂದು ಭವಿಷ್ಯ ನುಡಿದಿದ್ದೆ. ಸಿದ್ದಪ್ಪಜ್ಜನ ಗದ್ದುಗೆಯ ಮುಂದೆ ನೀನು ಮಾಡಿದ ಪ್ರಾರ್ಥನೆ ಫಲಿಸಿದ್ದು, 2023ರಲ್ಲಿ ನುಡಿದ ಭವಿಷ್ಯ 2026ರಲ್ಲಿ ನಿಜವಾಗಿದೆ ಎಂದು ಸ್ವಾಮೀಜಿ ನೆನಪಿಸಿಕೊಂಡರು.

ಸಚಿವರಿಗೆ ಆಶೀರ್ವಚನ ನೀಡಿದ ಸ್ವಾಮೀಜಿ ಪ್ರಯತ್ನ ವಿಫಲವಾಗಬಹುದು ಆದರೆ ಪ್ರಾರ್ಥನೆ ಅಲ್ಲ ಎನ್ನುವ ನಿನ್ನ ಮಾತು ನನಗೆ ತುಂಬಾ ಇಷ್ಟವಾಯಿತು  ನಿನ್ನಲ್ಲಿರುವ ಸಿಟ್ಟನ್ನು ಬಿಟ್ಟರೆ ಮುಂದೆ ಸಿಎಂ ಆಗ್ತಿಯಾ ಆದರೆ ಸಿಎಂ ಆಗ್ತಿ ಅಂದರೆ ಮಂದಿ ಸುಮ್ಮನಿರಲ್ಲ, ಎಚ್ಚರಿಕೆಯಿಂದಿರು  ಎಂದು ಮಾರ್ಮಿಕವಾಗಿ ಕಿವಿಮಾತು ಹೇಳಿದರು  ಕಲಾಪೋಷಕ ಮಠವೆಂದೇ ಪ್ರಸಿದ್ಧಿ ಪಡೆದಿರುವ ಸಿದ್ದನಕೊಳ್ಳ ಶ್ರೀಗಳು ನುಡಿದಿರುವ ಈ ಭವಿಷ್ಯ ಇದೀಗ ಉತ್ತರ ಕರ್ನಾಟಕ ಹಾಗೂ ರಾಜ್ಯ ರಾಜಕೀಯ ಅಂಗಳದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ವರದಿ : ಬಸವರಾಜ ಪೂಜಾರಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ