LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಕ್ರಮ ಗಣಿಗಾರಿಕೆ ನಡೆದಿಲ್ಲ: ತನಿಖೆ ನಡೆಸಿದರೂ ಸ್ವಾಗತ :ಶಾಸಕ ಮಹಾಂತೇಶ ಕೌಜಲಗಿ

Advertisement

ಬೈಲಹೊಂಗಲ: ಮುರಗೋಡ ಗ್ರಾಮದ ಸರಹದ್ದಿಯ ಗೈರಾಣ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆದಿಲ್ಲ. ವಿರೋಧ ಪಕ್ಷದವರು ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಈ ಕುರಿತು ಯಾವುದೇ ತನಿಖೆ ನಡೆಸಿದರೂ ಸ್ವಾಗತಿಸುತ್ತೇನೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ಬೈಲಹೊಂಗಲ ನಗರದ ನಿರೀಕ್ಷಣಾ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುರಗೋಡ ಭಾಗದಲ್ಲಿ ಸುಮಾರು ₹200 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಇದನ್ನು ಸಹಿಸಲಾಗದೆ ವಿರೋಧ ಪಕ್ಷದವರು ರಾಜಕೀಯ ದುರುದ್ದೇಶದಿಂದ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಕ್ರಮ ಗಣಿಗಾರಿಕೆಗೆ ತಾನು ಸಹಕಾರ ನೀಡಿದ್ದೇನೆ ಹಾಗೂ ಅವಕಾಶ ಮಾಡಿಕೊಟ್ಟಿದ್ದೇನೆ ಎಂಬ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ಯಾರೇ ತಪ್ಪು ಮಾಡಿದ್ದರೂ ಮುಲಾಜಿಲ್ಲದೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಅಕ್ರಮ ಗಣಿಗಾರಿಕೆ ಕುರಿತು ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕಂದಾಯ, ಗಣಿ ಹಾಗೂ ಅರಣ್ಯ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿತ್ತು. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಂಪೂರ್ಣ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಿದ್ದು, ಮುರಗೋಡದ ಗೈರಾಣ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆದಿರುವುದು ವರದಿಯಲ್ಲಿ ಕಂಡುಬಂದಿಲ್ಲ ಎಂದು ಕೌಜಲಗಿ ತಿಳಿಸಿದರು.

ಅನುಮತಿ ಪಡೆದು ಗಣಿಗಾರಿಕೆ

ವ್ಹಿ. ಲೋಕೇಶ ಹಾಗೂ ವೆಂಕಟೇಶ ಅವರಿಗೆ ಸೇರಿದ 9 ಎಕರೆ 11 ಗುಂಟೆ ಜಮೀನಿನಲ್ಲಿ ಎಂ-ಸ್ಯಾಂಡ್ ಉತ್ಪಾದನೆಗೆ ಸರ್ಕಾರ ಅನುಮತಿ ನೀಡಿತ್ತು. ತಮ್ಮ ಸ್ವಂತ ಜಮೀನಿನಲ್ಲಿ ಗಣಿಗಾರಿಕೆ ನಡೆಸಲಾಗಿದ್ದು, ಅನುಮತಿಗಿಂತ ಅಲ್ಪ ಪ್ರಮಾಣದಲ್ಲಿ ಗಣಿಗಾರಿಕೆ ನಡೆಸಿರುವುದು ಅಧಿಕಾರಿಗಳ ಪರಿಶೀಲನೆಯಲ್ಲಿ ತಿಳಿದುಬಂದಿದೆ.

ನಿಯಮ ಉಲ್ಲಂಘನೆ ಮಾಡಿದ ಜಮೀನು ಮಾಲೀಕರಿಗೆ ಸರ್ಕಾರದಿಂದ ಈಗಾಗಲೇ ₹5 ಲಕ್ಷ ದಂಡ ವಿಧಿಸಲಾಗಿದೆ. ಅಲ್ಲದೆ, ಸವದತ್ತಿಯ ಜೆಎಂಎಫ್‌ಸಿ ನ್ಯಾಯಾಲಯವೂ ₹34 ಲಕ್ಷಕ್ಕೂ ಅಧಿಕ ದಂಡ ವಿಧಿಸಿದೆ ಎಂದು ಶಾಸಕರು ಹೇಳಿದರು.

ಗೈರಾಣ ಜಮೀನಿನಲ್ಲಿ ಕೆಲವರು ಗಿಡಗಳನ್ನು ನಾಶಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2024ರಲ್ಲಿ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ. ಈ ವಿಚಾರದಲ್ಲಿಯೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದರು.

18 ಎಕರೆ ಸರ್ಕಾರಿ ಜಮೀನು ಅತಿಕ್ರಮಣ

ಮುರಗೋಡ ವ್ಯಾಪ್ತಿಯಲ್ಲಿ ಕೆಲವರು ಸರ್ಕಾರಿ ಜಮೀನನ್ನು ಅತಿಕ್ರಮಿಸಿಕೊಂಡು ಕೃಷಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಮಾಜಿ ಸೈನಿಕರು ಹಾಗೂ ರೈತರು ಸೇರಿದಂತೆ ಎಂಟು ಮಂದಿ ಸುಮಾರು 18 ಎಕರೆ ಸರ್ಕಾರಿ ಜಮೀನು ಅತಿಕ್ರಮಿಸಿಕೊಂಡಿರುವ ಮಾಹಿತಿ ಲಭ್ಯವಾಗಿದ್ದು, ಈಗಾಗಲೇ ಸರ್ವೆ ನಡೆಸಲಾಗಿದೆ. ಅಂತಹವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ನಿವೃತ್ತ ಸೈನಿಕರಿಗಾಗಿ ಸರ್ಕಾರದಿಂದ ಮಂಜೂರಾಗಿರುವ ಆರು ಎಕರೆ ಜಮೀನನ್ನು ಹೊರತುಪಡಿಸಿ, ಉಳಿದ ಅತಿಕ್ರಮಣದಾರರ ವಿರುದ್ಧ ಕ್ರಮ ಜರುಗಿಸಲಾಗುವುದು. ಸರ್ಕಾರಿ ಆಸ್ತಿ ಎಂದರೆ ನಮ್ಮೆಲ್ಲರ ಆಸ್ತಿ. ಅದನ್ನು ರಕ್ಷಿಸುವುದು ಎಲ್ಲರ ಕರ್ತವ್ಯ ಎಂದು ಕೌಜಲಗಿ ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರೇ ಅಕ್ರಮ ಗಣಿಗಾರಿಕೆಯಲ್ಲಿ ಪಾಲ್ಗೊಂಡಿದ್ದಾರೆ ಎಂಬ ವಿರೋಧ ಪಕ್ಷದ ಆರೋಪ ಸತ್ಯಕ್ಕೆ ದೂರವಾಗಿದ್ದು, ರಾಜಕೀಯ ದುರುದ್ದೇಶದಿಂದ ಆರೋಪ ಮಾಡಲಾಗುತ್ತಿದೆ. ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡ ಕಾರ್ತಿಕ ಪಾಟೀಲ, ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಮಹಾಂತೇಶ ತುರಮರಿ ಹಾಗೂ ಮುರಗೋಡ ಕಾಂಗ್ರೆಸ್ ಮುಖಂಡ ಪ್ರಶಾಂತ ಪಟ್ಟಣಶೆಟ್ಟಿ ಉಪಸ್ಥಿತರಿದ್ದರು.

ವರದಿ: ಸಮೀರ್ ಮುಲ್ಲಾನವರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟರಿಗೆ ಬೆದರಿಕೆ : ಬೆಂಗಳೂರಿನ ಟೆಕ್ಕಿ ಅರೆಸ್ಟ್ ಡೀಸೆಲ್ ಬೆಲೆ ಹೆಚ್ಚಾದಾಗ ಯಾರೂ ಮಾತನಾಡಲಿಲ್ಲ : ಡಿ. ಕೆ ಶಿವಕುಮಾರ್ ಅಗ್ನಿವೀರರ ಸೇವಾ ಅವಧಿ ಮತ್ತೆ 2 ವರ್ಷ ವಿಸ್ತರಣೆ : ಕೇಂದ್ರ ಅನುಮೋದನೆ ಕಬ್ಬಿನ ಬೆಳೆಗಾರರ ಸಂಧಾನ ಸಭೆಗಳು ವಿಫಲ : ಡಿಸಿ ಕಚೇರಿಗೆ ಬೀಗ ಹಾಕಲು‌ ಯತ್ನಿಸಿದ ರೈತರು ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಸುಲಭ ಜಯಅಸ್ಸಾಮ್ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ 314 ರನ್ ಗಳ ದೊಡ್ಡ ಗೆಲುವು ಗೃಹಲಕ್ಷ್ಮಿಯರ 5 ಸಾವಿರ ಕೋಟಿ ರೂ. ಹಣ ಎಲ್ಲಿ ಹೋಯಿತು? : ನಿಖಿಲ್ ಕುಮಾರಸ್ವಾಮಿಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ನಿಯಮ ಅಪ್ರಸ್ತುತ