LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪ್ರಾಧ್ಯಾಪಕನೊಂದಿಗೆ ಅಕ್ರಮ ಸಂಬಂಧ ಸುಳ್ಳು ಅಪಪ್ರಚಾರ : ವಿದ್ಯಾರ್ಥಿನಿ ಆತ್ಮಹತ್ಯೆ

Advertisement
ಚಿತ್ರದುರ್ಗ :ಪ್ರಾಧ್ಯಾಪಕರೊಬ್ಬರ ಜೊತೆ ಅಕ್ರಮ ಸಂಬಂಧವಿದೆ ಎಂಬ ಸುಳ್ಳು ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತು, ಬಿಎಎಂಎಸ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು 23 ವರ್ಷದ ನಿಖಿತಾ ಎಂದು ಗುರುತಿಸಲಾಗಿದೆ.ವಿದ್ಯಾರ್ಥಿನಿ ಹೊಳಲ್ಕೆರೆಯ ಬಸವ ಲೇಔಟ್‌ನ ನಿವಾಸಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಈಕೆಯ ಹೆಸರನ್ನು ಪ್ರಾಧ್ಯಾಪಕರೊಬ್ಬರ ಜೊತೆ ತಳುಕು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕವಾಗಿ ಅಪಪ್ರಚಾರ ಮಾಡಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಡೆತ್‌ ನೋಟ್‌ನಲ್ಲಿ ಸ್ಫೋಟಕ ಮಾಹಿತಿ

ಆತ್ಮಹತ್ಯೆಗೂ ಮುನ್ನ ನಿಖಿತಾ ಸುದೀರ್ಘ ಡೆತ್‌ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಪ್ರಾಧ್ಯಾಪಕ ರಾಜು, ಅವರ ಪತ್ನಿ ಹಾಗೂ ಕೆಲವು ಸಹಪಾಠಿ ವಿದ್ಯಾರ್ಥಿನಿಯರು ತನ್ನ ಮಾನಸಿಕ ಕಿರುಕುಳಕ್ಕೆ ಕಾರಣ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದು ಮತ್ತು ಮಾನಸಿಕವಾಗಿ ಹಿಂಸೆ ನೀಡಿದ್ದೇ ಈ ನಿರ್ಧಾರಕ್ಕೆ ಪ್ರೇರಣೆ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಪೊಲೀಸ್ ತನಿಖೆ ಮತ್ತು ದೂರು

ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಳ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಾಧ್ಯಾಪಕ ರಾಜು ಮತ್ತು ಅವರ ಪತ್ನಿ ಸೇರಿದಂತೆ ಇತರರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ (Abetment of Suicide) ಆರೋಪದಡಿ ಪ್ರಕರಣ ದಾಖಲಾಗಿದೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ