LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪ್ರಸ್ತಕ ವರ್ಷದಿಂದಲೇ 15 ಜಿಲ್ಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ 

Advertisement
ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗೆ ಸರ್ಕಾರ ಮುಂದಾಗಿದ್ದು, ಪ್ರಸಕ್ತ 2026-27ನೇ ಶೈಕ್ಷಣಿಕ ವರ್ಷದಿಂದಲೇ ಆಯ್ದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ 'ದ್ವಿಭಾಷಾ ಮಾಧ್ಯಮ' ನೀತಿಯನ್ನು ಜಾರಿಗೆ ತರಲು ಸಿದ್ಧತೆ ಮಾಡಿಕೊಂಡಿದೆ.

ಈ ಹೊಸ ನೀತಿಯ ಅನ್ವಯ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇನ್ಮುಂದೆ ಕನ್ನಡದ ಜೊತೆಗೆ ಇಂಗ್ಲಿಷ್ ಮಾಧ್ಯಮದಲ್ಲಿಯೂ ಪಾಠ ಪ್ರವಚನಗಳು ನಡೆಯಲಿವೆ.

ಶಿಕ್ಷಕರಿಗೆ ತೀವ್ರತರದ ತರಬೇತಿ

ದ್ವಿಭಾಷಾ ನೀತಿಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ರಾಜ್ಯದ ಸುಮಾರು 1,55,950 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಂಗ್ಲಿಷ್ ಮಾಧ್ಯಮ ಬೋಧನೆಯ ತರಬೇತಿಯನ್ನು ನೀಡಲು ಸರ್ಕಾರ ಚಾಲನೆ ನೀಡಿದೆ. ಈ ತರಬೇತಿಯು ಒಟ್ಟು ಮೂರು ಹಂತಗಳಲ್ಲಿ ನಡೆಯಲಿದ್ದು, ಶಿಕ್ಷಕರು ಮಕ್ಕಳಿಗೆ ಇಂಗ್ಲಿಷ್ನಲ್ಲಿ ಸುಲಭವಾಗಿ ಪಾಠ ಮಾಡುವ ಕೌಶಲವನ್ನು ಇಲ್ಲಿ ಕಲಿಯಲಿದ್ದಾರೆ.

ತರಬೇತಿಯ ಹಂತಗಳು:

ಮೊದಲ ಹಂತ: ಪ್ರತಿ ಜಿಲ್ಲೆಯ ಡಯಟ್ನಿಂದ (DIET) ಒಬ್ಬರು ನೋಡಲ್ ಅಧಿಕಾರಿಯಂತೆ ರಾಜ್ಯದ ಒಟ್ಟು 385 ಸಂಪನ್ಮೂಲ ವ್ಯಕ್ತಿಗಳಿಗೆ (MRP) ಬೆಂಗಳೂರಿನ ಪ್ರತಿಷ್ಠಿತ 'ಪ್ರಾದೇಶಿಕ ಇಂಗ್ಲಿಷ್ ಸಂಸ್ಥೆ ದಕ್ಷಿಣ ಭಾರತ' (RIE-SI) ವತಿಯಿಂದ ತರಬೇತಿ ನೀಡಲಾಗುತ್ತದೆ.

ಎರಡನೇ ಹಂತ: ಈ ತರಬೇತಿ ಪಡೆದ ಸಂಪನ್ಮೂಲ ವ್ಯಕ್ತಿಗಳು ಪ್ರತಿ ತಾಲೂಕಿನ ತಲಾ 15 ಸಂಪನ್ಮೂಲ ವ್ಯಕ್ತಿಗಳಂತೆ ರಾಜ್ಯದ ಒಟ್ಟು 3,060 ಶಿಕ್ಷಕರಿಗೆ ಜಿಲ್ಲಾ ಮಟ್ಟದಲ್ಲಿ ತರಬೇತಿ ನೀಡಲಿದ್ದಾರೆ.

ಮೂರನೇ ಹಂತ: ಅಂತಿಮವಾಗಿ ದ್ವಿಭಾಷಾ ಮಾಧ್ಯಮ ಜಾರಿಗೆ ಬರುವ ಶಾಲೆಗಳ ಎಲ್ಲಾ ಶಿಕ್ಷಕರಿಗೆ ಈ ತರಬೇತಿಯನ್ನು ತಲುಪಿಸಲಾಗುತ್ತದೆ.

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಸಜ್ಜುಗೊಳಿಸುವ ಗುರಿ

ಈ ಹಿಂದೆ ಎಸ್‌ಎಸ್‌ಎಲ್ಸಿಯಲ್ಲಿ ಹಿಂದಿ ಭಾಷೆಯ ಅಂಕಗಳನ್ನು ಕೈಬಿಟ್ಟ ಸರ್ಕಾರದ ನಿರ್ಧಾರಕ್ಕೆ ಟೀಕೆಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಕ್ಕಳ ಮೇಲಿನ ಒತ್ತಡ ಕಡಿಮೆ ಮಾಡಲು ಮತ್ತು ಅವರನ್ನು ಜಾಗತಿಕ ಸ್ಪರ್ಧೆಗೆ ಸಿದ್ಧಪಡಿಸಲು ಈ ದ್ವಿಭಾಷಾ ನೀತಿಯನ್ನು ಘೋಷಿಸಿದ್ದಾರೆ. ಇದು ಮಕ್ಕಳ ಭವಿಷ್ಯ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ತರಲಿದೆ ಎಂದು ಶಿಕ್ಷಣ ಇಲಾಖೆ ಆಶಯ ವ್ಯಕ್ತಪಡಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ