Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತ್ಯಾಚಾರ ಆರೋಪ : ಆರ್ ಸಿ ಯು ಸಿಂಡಿಕೇಟ್ ಸಭೆಯಲ್ಲಿ ಮಹತ್ವದ ನಿರ್ಧಾರ

Advertisement

ಬೆಳಗಾವಿ: ಪಿಹೆಚ್ ಡಿ ಪದವಿ ನೀಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಎರಡು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.ಈ ಬಗ್ಗೆ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿ ತ್ಯಾಗರಾಜ್ ಮಾಹಿತಿ ನೀಡಿದ್ದಾರೆ.


ಪಿಹೆಚ್ ಡಿ ಪದವಿ ನೀಡಿಲ್ಲ ಎಂಬ ಕಾರಣಕ್ಕೆ ಕಳೆದ ವಾರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಘಟನೆ ಬಳಿಕ ಸಿಂಡಿಕೇಟ್ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಎರಡು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ, ಪಿಹೆಚ್ ಡಿ ಪದವಿಗೆ ಅರ್ಹರಾಗಿದ್ದಾರೆ. ಹೀಗಾಗಿ ನಿಯಮಾನುಸಾರ ಅರ್ಜಿ ಸಲ್ಲಿಸಿದರೆ ಅವರಿಗೆ ಪಿಹೆಚ್ ಡಿ ಪದವಿ ನೀಡಲು ತೀರ್ಮಾನಿಸಲಾಗಿದೆ. ಇನ್ನು ಕುರುಕುಳ ಆರೋಪ ಹಿನ್ನೆಲೆಯಲ್ಲಿ ಪ್ರಾಧ್ಯಾಪಕ ಕೆ.ಎಲ್.ಎಸ್.ಮೂರ್ತಿ ಅವರಿಗೆ ಕಡ್ದಾಯ ನಿವೃತ್ತಿಗೆ ಆದೇಶ ನೀಡಲಾಗಿದೆ.

ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಜೊತೆ ಯಾವ ರೀತಿ ನಡೆದುಕೊಳ್ಳಬೇಕು ಎಂಬ ಬಗ್ಗೆ ನಿಯಮವಿದೆ. ಈ ನಿಯಮವನ್ನು ಪ್ರಾಧ್ಯಾಪಕ ಮೂರ್ತಿ ಪಾಲಿಸಿಲ್ಲ. ಹಾಗಾಗಿ ಅವರಿಗೆ ಕಡ್ಡಾಯ ನಿವೃತ್ತಿ ನೀಡಲಾಗುವುದು ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ