ಬೆಂಗಳೂರು: ರಾಜ್ಯದಲ್ಲಿ ರಚನೆಯಾಗಿರುವ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದ ಕುರಿತು ಪ್ರತಿಕ್ರಿಯಿಸಿರುವ ಸಂತೋಷ್ ಲಾಡ್ ಅವರು, ಯಾವುದೇ ಅತೃಪ್ತಿ ವ್ಯಕ್ತಪಡಿಸದೆ, 'ಇದು ಜೀವನದ ಒಂದು ಭಾಗ' ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಂತೋಷ್ ಲಾಡ್ , ಸಂಪುಟದ ಮೊದಲ ಪಟ್ಟಿಯಲ್ಲಿ ಅವಕಾಶ ಸಿಗದಿದ್ದರೂ, ಎರಡನೇ ಪಟ್ಟಿಯಲ್ಲಿ ತಮಗೆ ಸಚಿವ ಸ್ಥಾನ ಸಿಗಲಿದೆ ಎಂಬ ಬಲವಾದ ವಿಶ್ವಾಸ ವ್ಯಕ್ತಪಡಿಸಿದ್ದಾರೆ, ಪಕ್ಷದಲ್ಲಿ ಪ್ರತಿಯೊಬ್ಬರೂ ಅವಕಾಶಕ್ಕಾಗಿ ಪ್ರಯತ್ನಿಸುವುದು ಸಹಜ, ತಾನೂ ಕೂಡ ಆ ಸಾಲಿನಲ್ಲಿ ಇದ್ದೇನೆ ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಪರಮೇಶ್ವರ್ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬಲಪಡಿಸುವುದೇ ನಮ್ಮ ಮುಂದಿನ ಗುರಿ. 2028ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ನಾವೆಲ್ಲರೂ ಒಗ್ಗಟ್ಟಾಗಿ ಶ್ರಮಿಸುತ್ತೇವೆ ಎಂದು ಸಂತೋಷ್ ಲಾಡ್ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.


