Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ತುಂಗಭದ್ರಾ ಜಲಾಶಯದ 33 ಸ್ಪಿಲ್ವೇ ಗೇಟುಗಳ ಲೋಕಾರ್ಪಣೆ : ಮೂರು ರಾಜ್ಯಗಳ ಸಿಎಂ ಭಾಗಿ 

Advertisement

ಕೊಪ್ಪಳ : ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಿದ 33 ಸ್ಪಿಲ್ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮವು ಜೂನ್ 25ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದ್ದು, ಸನ್ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಸ್ಪಿಲ್ ವೇ ಗೇಟುಗಳನ್ನು ಲೋಕಾರ್ಪಣೆಗೊಳಿಸುವರು.

ಜಲಸಂಪನ್ಮೂಲ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸರ್ಕಾರಿ ಹೈಸ್ಕೂಲ್ ಗ್ರೌಂಡ್ ನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್. ಪಾಟೀಲ್, ಆಂಧ್ರಪ್ರದೇಶ ಮುಖ್ಯಮಂತ್ರಿಗಳಾದ ಎನ್.ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿಗಳಾದ ಎ.ರೇವಂತ್ ರೆಡ್ಡಿ, ಕರ್ನಾಟಕ ಉಪ ಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ್, ಆಂಧ್ರಪ್ರದೇಶ ಉಪ ಮುಖ್ಯಮಂತ್ರಿಗಳಾದ ಕೆ.ಪವನ್ ಕಲ್ಯಾಣ್, ತೆಲಂಗಾಣ ಉಪ ಮುಖ್ಯಮಂತ್ರಿಗಳಾದ ಮಲ್ಲು ಭಟ್ಟಿ ವಿಕ್ರಮಾರ್ಕ, ಭಾರತ ಸರ್ಕಾರದ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ. ಸೋಮಣ್ಣ, ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವರಾದ ರಾಜ ಭೂಷಣ್ ಚೌಧರಿ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್ ಹೊರಟ್ಟಿ, ಕರ್ನಾಟಕ ಸರ್ಕಾರದ ಭಾರಿ ಮತ್ತು ಮಧ್ಯಮ ನೀರಾವರಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರ ಸಂಸದರಾದ ಬಸವರಾಜ ಬೊಮ್ಮಾಯಿ, ಆಂಧ್ರಪ್ರದೇಶದ ಜಲಸಂಪನ್ಮೂಲ ಇಲಾಖೆ ಸಚಿವರಾದ ಡಾ. ನಿಮ್ಮಲ ರಾಮನಾಯ್ಡು, ಆಂಧ್ರಪ್ರದೇಶದ ಹಣಕಾಸು, ಯೋಜನೆ, ವಾಣಿಜ್ಯ ತೆರಿಗೆ ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪಯ್ಯವುಲ ಕೇಶವ್, ತೆಲಂಗಾಣದ ನೀರಾವರಿ ಇಲಾಖೆ ಹಾಗೂ ಸಿಎಡಿ ಸಚಿವರಾದ ಎನ್.ಉತ್ತಮ್ ಕುಮಾರ ರೆಡ್ಡಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ಶಾಸಕರಾದ ಸಲೀಂ ಅಹಮದ್ ಅವರು ಘನ ಉಪಸ್ಥಿತಿ ವಹಿಸುವರು.

 

 

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST