LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬ್ಯಾಲಹಳ್ಳಿ ಗೇಟ್ ನಲ್ಲಿ ಚುಂಚಾದ್ರಿ ವಿದ್ಯಾರ್ಥಿ ವಸತಿ ನಿಲಯ ಲೋಕಾರ್ಪಣೆ

Advertisement

ತುರುವೇಕೆರೆ : ಮುಂದಿನ ದಿನಗಳಲ್ಲಿ ಭೂಮಿಗೆ ಚಿನ್ನದ ಬೆಲೆ ಬರಲಿದ್ದು, ರೈತರು ಯಾರೂ ಸಹ ತಮ್ಮ ಭೂಮಿಯನ್ನು ಮಾರಾಟ ಮಾಡಬಾರದು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಕರೆ ನೀಡಿದರು.

news_1790241249_0_664.webp

 

ತಾಲ್ಲೂಕಿನ ಬ್ಯಾಲಹಳ್ಳಿ ಗೇಟ್ ನಲ್ಲಿ ಆದಿಚುಂಚನಗಿರಿ ಕೃಷಿ ವಿಜ್ಞಾನ ಕಾಲೇಜು, ಆದಿಚುಂಚನಗಿರಿ ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಆಶ್ರಯದಲ್ಲಿ ಆಯೋಜಿಸಿದ್ದ ಚುಂಚಾದ್ರಿ ವಿದ್ಯಾರ್ಥಿ ವಸತಿ ನಿಲಯವನ್ನು ಉದ್ಘಾಟಿಸಿ ಆರ್ಶೀವಚನ ನೀಡಿ ಮಾತನಾಡಿದ ಅವರು, ಈ ಹಿಂದೆ ನಗರ ಪ್ರದೇಶದಲ್ಲಿ ಉದ್ಯೋಗ ಅರಸಿ ತೆರಳಿದ್ದ ಯುವಕರು ಕೊರೊನಾ ಸಂದರ್ಭದಲ್ಲಿ ಹಳ್ಳಿಗಳಿಗೆ ದೌಡಾಯಿಸಿ ಪಾರಂಪರಿಕ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ತಮ್ಮ ಬದುಕನ್ನು ಕಂಡುಕೊಂಡಿದ್ದನ್ನು ಕಂಡಿದ್ದೇವೆ. ಮುಂದಿನ ದಿನಗಳಲ್ಲಿಯೂ ನಗರದಲ್ಲಿ ದುಡಿಯುತ್ತಿರುವ ಯುವಸಮೂಹ ಹಳ್ಳಿಗಳತ್ತ ಮುಖಮಾಡಲಿದ್ದು, ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಬಲ ಬರಲಿದೆ. ಕೃಷಿ ಚಟುವಟಿಕೆ ದೈಹಿಕ, ಮಾನಸಿಕ ಆರೋಗ್ಯವನ್ನು ತಂದುಕೊಡುತ್ತದೆ. ಕೃಷಿ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ಯುವಕರು ತಮ್ಮ ಹಿರಿಯರಿಗೆ ಭೂಮಿಯನ್ನು ಮಾರದಂತೆ ಹಾಗೂ ಭೂಮಿಯನ್ನು ಉಳಿಸಿಕೊಳ್ಳುವುದರಿಂದ ಭೂಮಿಯನ್ನು ಚಿನ್ನದ ಭೂಮಿಯನ್ನಾಗಿಸಬಹುದೆಂಬ ಅರಿವು ಮೂಡಿಸಿ ಎಂದರು.

ನೀರಿನ ಕೊರತೆ ಇರುವ ಇಸ್ರೇಲ್ ದೇಶದ ಕೃಷಿಯನ್ನು ನಾವು ಕೊಂಡಾಡುತ್ತೇವೆ. ಆದರೆ ಆ ದೇಶ ಕಡಿಮೆ ನೀರಿನಲ್ಲಿ ಅತ್ಯಂತ ಹೆಚ್ಚು ಬೆಳೆಯನ್ನು ಹೇಗೆ ಬೆಳೆಯುತ್ತಿದೆ ಎಂಬ ಅಂಶವನ್ನು ನಾವು ಗಮನಿಸುವುದಿಲ್ಲ. ನಮ್ಮ ದೇಶದಲ್ಲೂ ಶೇ.60 ಮಂದಿ ಕೃಷಿಯಲ್ಲಿ ತೊಡಗಿದ್ದು, ದೇಶದ ಆರ್ಥಿಕತೆಗೆ ಅವರ ಕೊಡುಗೆ ಶೇ.18 ರಷ್ಟು ಮಾತ್ರ ಆಗಿದೆ. ಈ ಶೇಕಡಾವಾರು ಅಂಶವನ್ನು ಹೆಚ್ಚಿಸಿ ಶೇ.50 ರಷ್ಟಕ್ಕೆ ಕೊಂಡೊಯ್ಯಬೇಕಾದರೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಕೃಷಿ ಕ್ಷೇತ್ರ ಅಭಿವೃದ್ದಿ ಹೊಂದಬೇಕಾದರೆ ಕೃಷಿ ವಿಜ್ಞಾನಿಗಳ ಅವಶ್ಯಕತೆ ದೇಶಕ್ಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಜೋಡಿಸಬೇಕಿದೆ. ಯುವ ಸಮೂಹ ಕೃಷಿ ಕ್ಷೇತ್ರದತ್ತ ಹೆಚ್ಚಿನ ಆಸಕ್ತಿ ವಹಿಸಬೇಕಿದೆ ಎಂದರು.

ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀ ಪ್ರಸನ್ನನಾಥ ಸ್ವಾಮೀಜಿ ಉಪಹಾರ ನೀಡಿದ್ದು ಭಕ್ತರಲ್ಲಿ ಸಂತಸ ಮೂಡಿಸಿತು. ಕಾರ್ಯಕ್ರಮದಲ್ಲಿ ಮಠದ ಪ್ರಧಾನ ಕಾರ್ಯದರ್ಶಿ  ಶ್ರೀ ಪ್ರಸನ್ನನಾಥ ಸ್ವಾಮೀಜಿ, ಉದ್ಯಮಿ ಕೆಂಪಯ್ಯ, ಪ್ರೊ.ಪುಟ್ಟರಂಗಪ್ಪ, ಜಿಪಂ ಮಾಜಿ ಸದಸ್ಯರಾದ ಎನ್.ಆರ್.ಜಯರಾಮ್, ಎ.ಬಿ.ಜಗದೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ಕೊಂಡಜ್ಜಿ ವಿಶ್ವನಾಥ್, ಎಂ.ಎನ್.ಚಂದ್ರೇಗೌಡ, ವಕೀಲ ಧನಪಾಲ್, ಕೃಷಿ ವಿಜ್ಞಾನ ಕಾಲೇಜಿನ ಡೀನ್ ಡಾ.ಶಿವಲಿಂಗೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ : ಗಿರೀಶ್ ಕೆ ಭಟ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟರಿಗೆ ಬೆದರಿಕೆ : ಬೆಂಗಳೂರಿನ ಟೆಕ್ಕಿ ಅರೆಸ್ಟ್ ಡೀಸೆಲ್ ಬೆಲೆ ಹೆಚ್ಚಾದಾಗ ಯಾರೂ ಮಾತನಾಡಲಿಲ್ಲ : ಡಿ. ಕೆ ಶಿವಕುಮಾರ್ ಅಗ್ನಿವೀರರ ಸೇವಾ ಅವಧಿ ಮತ್ತೆ 2 ವರ್ಷ ವಿಸ್ತರಣೆ : ಕೇಂದ್ರ ಅನುಮೋದನೆ ಕಬ್ಬಿನ ಬೆಳೆಗಾರರ ಸಂಧಾನ ಸಭೆಗಳು ವಿಫಲ : ಡಿಸಿ ಕಚೇರಿಗೆ ಬೀಗ ಹಾಕಲು‌ ಯತ್ನಿಸಿದ ರೈತರು ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಸುಲಭ ಜಯಅಸ್ಸಾಮ್ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ 314 ರನ್ ಗಳ ದೊಡ್ಡ ಗೆಲುವು ಗೃಹಲಕ್ಷ್ಮಿಯರ 5 ಸಾವಿರ ಕೋಟಿ ರೂ. ಹಣ ಎಲ್ಲಿ ಹೋಯಿತು? : ನಿಖಿಲ್ ಕುಮಾರಸ್ವಾಮಿಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ನಿಯಮ ಅಪ್ರಸ್ತುತ