
ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿದ ಮಹರ್ಷಿ ಶ್ರೀ ವಾಲ್ಮೀಕಿ ಸಮುದಾಯ ಭವನವನ್ನು ಇಂದು ಉದ್ಘಾಟಿಸಿ ಮಾತನಾಡಿದರು.

ಈ ವೇಳೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು, ಶಿರಹಟ್ಟಿಯ ಫಕೀರೇಶ್ವರ ಮಠದ ಫಕೀರ್ ಶ್ರೀ ದಿಂಗಾಲೇಶ್ವರ ಮಹಾಸ್ವಾಮಿಗಳು, ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಚ್.ಕೆ. ಪಾಟೀಲ, ರೋಣ ಶಾಸಕರಾದ ಶ್ರೀ ಜಿ.ಎಸ್. ಪಾಟೀಲ ಹಾಗೂ ಮುಖಂಡರು ಉಪಸ್ಥಿತರಿದ್ದರು.
ವರದಿ:- ರಾಜು ಮುಂಡೆ

