Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಧನಾ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆ ಉದ್ಘಾಟನೆ

Advertisement
ಸಿರುಗುಪ್ಪ : ನಗರದ ರೇಣುಕಾಶ್ರಮದ ಹತ್ತಿರದಲ್ಲಿ ನೂತನವಾಗಿ ಸಾಧನಾ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆಯ ಪ್ರಾರಂಭದ ಕಾರ್ಯಕ್ರಮವನ್ನು ರವಿವಾರದಂದು ಗುರು ಬಸವ ಮಠದ ಶ್ರೀ ಬಸವಭೂಷಣ ಸ್ವಾಮೀಜಿ ಅವರು ಉದ್ಘಾಟಿಸಿದರು.

ಹಳೇಕೋಟೆ ಶ್ರೀ ಮರಿತಾತ ಮಠದ ಶ್ರೀ ಸಿದ್ದಬಸವ ಶ್ರೀ ಅವರು ಮಕ್ಕಳ ಉಜ್ವಲ ಭವಿಷ್ಯದ ದೃಷ್ಟಿಯಿಂದ ಉತ್ತಮ ಶಿಕ್ಷಣ ಅತ್ಯಗತ್ಯವಾಗಿದ್ದು, ಅಂತಹ ಶಿಕ್ಷಣವನ್ನು ನೀಡಲು ಮುಂದಾಗಿರುವ ಶಾಲಾ ಆಡಳಿತ ಮಂಡಳಿಯ ಕಾರ್ಯ ಶ್ಲಾಘನೀಯ. ಹಾಗೂ ಮುಂದಿನ ದಿನಗಳಲ್ಲಿ ಶಾಲೆಯ ಕೀರ್ತಿ ಉತ್ತುಂಗಕ್ಕೇರಲಿ ಎಂದು ಆಶೀರ್ವದಿಸಿದರು.

ವ್ಯವಸ್ಥಾಪಕ ನಿರ್ದೇಶಕ ಎನ್.ಲಿಂಗನಗೌಡ ಅವರು ಮಾತನಾಡಿ ಕಳೆದ ವರ್ಷ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗೆ ತರಬೇತಿ ನೀಡಲಾಗಿದ್ದು, ನವೋದಯ, ಸೈನಿಕ, ಕಿತ್ತೂರು ಸೈನಿಕ, ಮೊರಾರ್ಜಿ ದೇಸಾಯಿ, ಆದರ್ಶ ವಿದ್ಯಾಲಯ, ಅಲ್ಪ ಸಂಖ್ಯಾತರ ಮೊರಾರ್ಜಿ ಶಾಲೆಗಳಿಗೆ ನಮ್ಮ ಸಾಧನಾ ಕೋಚಿಂಗ್ ಸೆಂಟರ್‌ನಿಂದ ಹಲವಾರು ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ.

ಈ ಸಲವು ನಮ್ಮ ಸೆಂಟರ್‌ನಲ್ಲಿ ಬೇಸಿಗೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಅಬ್ಯಾಕಸ್, ಯೋಗ, ನೃತ್ಯ ತರಬೇತಿಗಳ ಜೊತೆಗೆ, ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ನುರಿತ ಶಿಕ್ಷಕರಿಂದ ತರಬೇತಿ ನೀಡಲಾಗುತ್ತಿದೆ.

ಶಾಲೆ ಮತ್ತು ವಸತಿ ಸಹಿತ ಕೋಚಿಂಗ್ ಸೆಂಟರ್‌ನ ತರಗತಿಗಳು ಆರಂಭವಾಗಿದ್ದು ಪಾಲಕರು ತಮ್ಮ ಮಕ್ಕಳ ದಾಖಲಿಸಬೇಕೆಂದು ತಿಳಿಸಿದರು.

ಇದೇ ವೇಳೆ ಮುಖಂಡರಾದ ಆರ್.ಸಿ.ಪಂಪನಗೌಡ, ಗೋನಾಳ್ ರಾಜಶೇಖರ ಗೌಡ, ಶಾಲಾ ಶಾಂತಿನಿಕೇತನ ಮುಖ್ಯಗುರು ಧರ್ಮಣ್ಣ, ಕೋಚಿಂಗ್ ಸೆಂಟರ್ ಮುಖ್ಯೋಪಾದ್ಯಾಯಿನಿ ಶಿಲ್ಪಾ ಹಾಗೂ ಶಾಲೆಯ ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳಿದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ