ಬೆಂಗಳೂರು: ರಾಜ್ಯದ ಬಸ್ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ದರಗಳು ಹೆಚ್ಚಾಗುತ್ತಿದ್ದು, ಎಲ್ಲಾ ಸಾರಿಗೆ ನಿಗಮಗಳಿಗೆ ಸುಮಾರು 5000 ಕೋಟಿ ರೂ. ನಷ್ಟವಾಗುತ್ತಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಯಾಣ ದರ ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಆದರೆ ಸರ್ಕಾರಕ್ಕೆ ಇಲಾಖೆಯಿಂದ ಇದುವರೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ. ಮುಂದಿನ ಸಚಿವ ಸಂಪುಟ ಸಭೆಗಳಲ್ಲಿ ಪ್ರಯಾಣ ದರ ಏರಿಕೆ ಬಗ್ಗೆ ಪ್ರಸ್ತಾವನೆ ಮಂಡಿಸಲಿದ್ದು, ಮುಖ್ಯಮಂತ್ರಿ ಅವರು ಮತ್ತು ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಪ್ರಯಾಣ ದರ ಹೆಚ್ಚಳಕ್ಕೆ ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ.
ಪೆಟ್ರೋಲ್, ಡೀಸೆಲ್ ದರಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಎಲ್ಲಾ ಸಾರಿಗೆ ನಿಗಮಗಳಿಗೆ ಸುಮಾರು 5000 ಕೋಟಿ ರೂ. ನಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಹೊರೆಯಾಗದಂತೆ ಬಸ್ ಪ್ರಯಾಣ ದರ ಏರಿಕೆ ಮಾಡುವ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


