Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ

Advertisement
ಸಿರುಗುಪ್ಪ : -ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯಿತಿ, ನಗರಸಭೆಗಳ ಸಹಯೋಗದಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಶಾಸಕ ಬಿ.ಎಮ್.ನಾಗರಾಜ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ತಾಲೂಕಾಧ್ಯಕ್ಷ, ತಹಶೀಲ್ದಾರ್ ಹೆಚ್.ವಿಶ್ವನಾಥ ಅವರು ಧ್ವಜಾರೋಹಣ ನೆರವೇರಿಸಿದರು.



ಬ್ರಿಟೀಷರ ಕಪಿಮುಷ್ಟಿಯಲ್ಲಿದ್ದ ನಮ್ಮ ದೇಶವನ್ನು ಸ್ವತಂತ್ರಗೊಳಿಸಲು 1857 ರಿಂದ 1947 ರವರೆಗೆ ಹೋರಾಡಿದ ನಮ್ಮ ನಾಯಕರು ರಕ್ತವನ್ನು ಸುರಿಸಿದ್ದಾರೆ. ಅಂತಹ ಮಹಾನ್ ನಾಯಕರ ಹೋರಾಟದ ಫಲವಾಗಿ ನಮ್ಮ ದೇಶವು ವಿಶ್ವದಲ್ಲಿ ಅಭಿವೃದ್ದಿ ದೇಶವಾಗಿ ಹೊರಹೊಮ್ಮಿದ್ದು ಸ್ವತಂತ್ರಕ್ಕಾಗಿ ತ್ಯಾಗ ಬಲಿದಾನಗೈದ ಹುತಾತ್ಮರನ್ನು ಮಹಾತ್ಮರನ್ನು ನೆನಪಿಸಿಕೊಂಡು ಸ್ಮರಿಸಬೇಕಿದೆಂದರು.ಶಾಸಕ ಬಿ.ಎಮ್.ನಾಗರಾಜ ಅವರು ಮಾತನಾಡಿ ಈ ಭಾಗದ ಜೀವನದಿಯೆಂದು ಕರೆಯುವ ತುಂಗಾಭದ್ರ ನದಿಯ ಜಲಾಶಯದ 19ನೇ ಗೇಟ್ ಕಿತ್ತುಹೋಗಿರುವ ಬಗ್ಗೆ ಮುಖ್ಯಮಂತ್ರಿ ಉಪಮುಖ್ಯಮಂತ್ರಿಗಳು ಜಲಾಶಯಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಾರ್ಯಕ್ರಮದಲ್ಲಿ ಆವರಣದ ಸುತ್ತ ಪೆರೇಡ್ ನಡೆಸಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ನಡೆದ ಪಥಸಂಚಲನದ ಮೂಲಕ ಶಾಸಕರು, ತಹಶೀಲ್ದಾರರು, ಡಿವೈಎಸ್‌ಪಿ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರಪ್ಪ ಗೌರವ ಸ್ವೀಕರಿಸಿದರು.ನಗರದ 7,8ನೇ ವಿಭಾಗದ ಶಾಲೆಯ ನರ್ಸರಿ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು.

ಪಥಸಂಚಲನ, ಸಾಹಸ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪುರಸ್ಕರಿಸಲಾಯಿತು.ಇದೇ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿ ಪವನ್‌ಕುಮಾರ್.ಎಸ್.ದಂಡಪ್ಪನವರ್, ಅಬಕಾರಿ ಇಲಾಖೆ ನಿರೀಕ್ಷಕಿ ಕೀರ್ತನಾ, ತಾಲೂಕು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಿಟ್ಟೂರು ಕರಿಬಸಪ್ಪ, ದೈಹಿಕ ಪರಿವೀಕ್ಷಕ ರಮೇಶ, ಇನ್ನಿತರ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

ವರದಿ:- ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ