LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭಾರತ- ಇಂಗ್ಲೆಂಡ್ ತೃತೀಯ ಟೆಸ್ಟ್ ಇಂದಿನಿಂದ

Advertisement
ಲಂಡನ್ (ಲಾಡ್ಸ್): ಭಾರತ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ಇಂದು ಇಲ್ಲಿನ ಕ್ರಿಕೆಟ್ ಕಾಶಿ ಎಂದೇ ಖ್ಯಾತಿ ಗಳಿಸಿರುವ ಲಾಡ್ಸ್ ಮೈದಾನದಲ್ಲಿ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ.

ಐದು ಟೆಸ್ಟ್ ಗಳ ಸರಣಿಯಲ್ಲಿ ಎರಡು ಟೆಸ್ಟ್ ಗಳನ್ನು ಆಡಲಾಗಿದ್ದು, ಉಭಯ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಗೆದ್ದಿವೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯ ಕುತೂಹಲ ಕೆರಳಿಸಿದೆ. ಭಾರತ ಮೊದಲ ಟೆಸ್ಟ್ ಗೆ ಹೋಲಿಸಿದರೆ ಎರಡನೇ ಟೆಸ್ಟ್ ನಲ್ಲಿ ಅತ್ಯುತ್ತಮ ಬದಲಾವಣೆಯೊಂದಿಗೆ ಸುಧಾರಿತ ಪ್ರದರ್ಶನ ನೀಡಿತು.

ಎರಡನೇ ಟೆಸ್ಟ್ ನಲ್ಲಿ ವಿಶೇಷವಾಗಿ ಬೌಲಿಂಗ್ ವಿಭಾಗದಲ್ಲಿ ಭಾರತ ಉತ್ತಮ  ನಿರ್ವಹಣೆ ತೋರಿತು.  ಜಸ್ಪ್ರೀತ್ ಬೂಮ್ರಾ ಅನುಪಸ್ಥಿತಿಯಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದ ಆಕಾಶ ದೀಪ್ ದ್ವಿತೀಯ ಇನ್ನಿಂಗ್ಸ್ ನಲ್ಲಿ 6  ವಿಕೆಟ್ ಪಡೆದು ಭಾರತದ ಗೆಲುವಿಗೆ ಶ್ರಮಿಸಿದ್ದರು.

ನಾಯಕ ಶುಭಮಾನ್ ಗಿಲ್ ಎರಡೂ ಇನ್ನಿಂಗ್ಸ್ ಗಳಲ್ಲಿಯೂ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.  ನಾಳೆಯ ಪಂದ್ಯಕ್ಕೆ ಬದಲಾವಣೆಯ ಸಾಧ್ಯತೆ ಕಡಿಮೆ ಇದೆಯಾದರೂ ಜಸ್ಪ್ರಿತ್ ಬೂಮ್ರಾ ಲಭ್ಯರಾದರೆ ಇರುವ ತಂಡದಲ್ಲಿರುವ ಯಾವ ಬೌಲರ್ ಸ್ಥಾನ ಕಳೆದುಕೊಳ್ಳಲಿದ್ದಾರೆಂಬುದು ಕುತೂಹಲ ಏಕೆಂದರೆ ಸಿರಾಜ್ ಕೂಡ ಉತ್ತಮ ಬೌಲಿಂಗ್  ನಿರ್ವಹಣೆ ತೋರಿದ್ದಾರೆ. ಹೀಗಾಗಿ ಬೂಮ್ರಾ ಆಡಿಸುವ ಸಲುವಾಗಿ ಬದಲಾವಣೆ ಮಾಡಬೇಕೆಂದರೆ ಕನ್ನಡಿಗ ಪ್ರಸಿದ್ದ ಕೃಷ್ಣ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಯೂ ಇದೆ. ಬ್ಯಾಟಿಂಗ್ ವಿಭಾಗದಲ್ಲಿ ಹೆಚ್ಚಿನ ಬದಲಾವಣೆಯ ಸಾಧ್ಯತೆ ಇಲ್ಲವಾದರೂ ಮತ್ತೋರ್ವ ಕನ್ನಡಿಗ ಕರುಣ್ ಎರಡೂ ಟೆಸ್ಟ್ ಗಳಲ್ಲಿ ನಿರೀಕ್ಷೆ ಪ್ರಮಾಣದಲ್ಲಿ ಯಶಸ್ವಿಯಾಗಿಲ್ಲ. ಆದರೆ ಅವರಿಗೆ ಮತ್ತೇ ಸ್ಥಾನ ಸಿಗುವ ಸಾಧ್ಯತೆ ಇದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ