Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೈವಕ್ಕೆ ಅಪಮಾನ : ಚಾಮುಂಡಿ ಬೆಟ್ಟಕ್ಕೆ ದೇವಿ ಮುಂದೆ ಕ್ಷಮೆಯಾಚಿಸಿದ್ದ ರಣವೀರ್ ಸಿಂಗ್ 

Advertisement

ಮೈಸೂರು: 'ಕಾಂತಾರ' ಸಿನಿಮಾದ ಪಂಜುರ್ಲಿ ಹಾಗೂ ಚಾವುಂಡಿ ದೈವದ ಪಾತ್ರವನ್ನು ಹೆಣ್ಣು ದೆವ್ವ ಎಂದು ಕರೆದು, ಅಪಹಾಸ್ಯ ಮಾಡಿದ್ದ ಆರೋಪ ಎದುರಿಸುತ್ತಿದ್ದ ಬಾಲಿವುಡ್ ನಟ ರಣವೀರ್ ಸಿಂಗ್, ಇದೀಗ ಮೈಸೂರಿನ ಸಾಂಸ್ಕೃತಿಕ ನಗರಿಗೆ ಭೇಟಿ ನೀಡಿದ್ದಾರೆ. 

ಯಾರಿಗೂ ಮುನ್ಸೂಚನೆ ನೀಡದಂತೆ ರಹಸ್ಯವಾಗಿ ಮೈಸೂರಿನ ಪ್ರಸಿದ್ಧ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿದ ಅವರು, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.ಅಲ್ಲದೆ, ತಮ್ಮಿಂದಾದ ತಪ್ಪಿಗೆ ತಾಯಿಯ ಸನ್ನಿಧಿಯಲ್ಲಿ ತಲೆಬಾಗಿ ಕ್ಷಮೆಯಾಚಿಸಿದ್ದಾರೆ.

ರಣವೀರ್ ಸಿಂಗ್ ಅವರು ದೇವಸ್ಥಾನದ ಗರ್ಭಗುಡಿಯ ಮುಂದೆ ಅತ್ಯಂತ ಭಕ್ತಿಭಾವದಿಂದ ಕುಳಿತು, ಕೈಮುಗಿದು ತಲೆಬಾಗಿ ಕ್ಷಮೆ ಕೇಳುತ್ತಿರುವ ಫೋಟೋಗಳು ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ.

ಈ ಹಿಂದೆ ಈ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ, ರಣವೀರ್ ಸಿಂಗ್ ಅವರು ತಮ್ಮ ಅಧಿಕೃತ 'ಎಕ್ಸ್' (ಟ್ವಿಟರ್) ಖಾತೆಯಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದರು. 

ಅಷ್ಟೇ ಅಲ್ಲದೆ, ಶೀಘ್ರದಲ್ಲೇ ಕರ್ನಾಟಕದ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಖುದ್ದಾಗಿ ಭೇಟಿ ನೀಡಿ ಪ್ರಾಯಶ್ಚಿತ್ತ ಪೂಜೆ ಸಲ್ಲಿಸುವುದಾಗಿ ನ್ಯಾಯಾಲಯ ಹಾಗೂ ಸಾರ್ವಜನಿಕರಿಗೆ ಭರವಸೆ ನೀಡಿದ್ದರು. ಅದರಂತೆ ಈಗ ಅವರು ಮೈಸೂರಿಗೆ ಬಂದು ದೈವದ ಅಪಮಾನದ ಕಳಂಕ ಕಳೆದುಕೊಳ್ಳಲು ಯತ್ನಿಸಿದ್ದಾರೆ.

 

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ