LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕುತೂಹಲ ಯಡಿಯೂರಪ್ಪ ದೇವೇಗೌಡರ ಅರ್ಧಗಂಟೆ ಮಾತುಕತೆ! 

Advertisement

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್‌ ಸೃಷ್ಟಿಸಿರುವ ಕೋಲಾಹಲ, ಇತ್ತೀಚಿನ ವಿಧಾನಪರಿಷತ್ ಚುನಾವಣೆಯ ಫಲಿತಾಂಶದ ಮಧ್ಯೆ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಹೆಚ್‌ಡಿ ದೇವೇಗೌಡರೊಂದಿಗೆ ಬಿಎಸ್‌ವೈ ಚರ್ಚೆ ಕುತೂಹಲ

ಶುಕ್ರವಾರ ಸಂಜೆ ಪದ್ಮನಾಭನಗರದಲ್ಲಿನ ಗೌಡರ ನಿವಾಸಕ್ಕೆ ತೆರಳಿದ ಯಡಿಯೂರಪ್ಪ ಅವರು ಸುಮಾರು ಅರ್ಧ ಗಂಟೆ ಕಾಲ ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ದೇವೇಗೌಡರನ್ನು ಭೇಟಿ ಮಾಡಿ ರಾಜ್ಯದ ಪ್ರಚಲಿತ ರಾಜಕೀಯ ವಿದ್ಯಮಾನಗಳು, ಕಾಂಗ್ರೆಸ್ ಸರ್ಕಾರದ ಆಡಳಿತ ಹಾಗೂ ಮುಂಬರುವ ರಾಜಕೀಯ ಬೆಳವಣಿಗೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ್ದೇನೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ಬಗ್ಗೆ ದೇವೇಗೌಡರಿಗೆ ಅಸಮಾಧಾನ?

ದೇವೇಗೌಡರು ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಅನೇಕ ಮಹತ್ವದ ಸಲಹೆಗಳನ್ನು ನೀಡಿದ್ದಾರೆ.

 ಕರ್ನಾಟಕದಲ್ಲಿ ಉತ್ತಮ ಆಡಳಿತ ಮತ್ತು ರಾಜಕೀಯ ಸ್ಥಿರತೆ ನೆಲೆಸಬೇಕು ಎಂಬುದು ಎಲ್ಲರ ಅಪೇಕ್ಷೆಯಾಗಿದೆ. ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಅವರು ಸಲಹೆ ನೀಡಿದ್ದಾರೆ.

ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಅವರಿಗೂ ಅಸಮಾಧಾನವಿದ್ದು, ಆದಷ್ಟು ಶೀಘ್ರವಾಗಿ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕೆಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅವರ ಸಲಹೆಗಳು ನನ್ನ ಅಭಿಪ್ರಾಯಕ್ಕೂ ಪೂರಕವಾಗಿವೆ ಎಂದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ. 1 ರಂದು ಭಾರತ- ನ್ಯೂಜಿಲೆಂಡ್ 5 ನೇ ಟಿ-20 ಪಂದ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಬಾಗಲಕೋಟೆ ಜಿಲ್ಲೆಯ ಇಬ್ಬರು ಆಯ್ಕೆಸವದತ್ತಿ ನಗರ ಪತ್ರಕರ್ತರ ಸಂಘದಿಂದ ತಾಲೂಕು ದಂಡಾಧಿಕಾರಿ ಹೆಗ್ಗಣ್ಣವರ್ ಗೆ ಸನ್ಮಾನ ವಿಧಿ ಇಲ್ಲದೆ ಹಾಲಿನ ದರ ಏರಿಕೆ ಮಾಡಿದ್ದೇವೆ : ಡಿಕೆ ಶಿವಕುಮಾರ್ ಸಮರ್ಥನೆ!ವಿದ್ಯಾರ್ಥಿನಿಯರಿಗೆ 'ಐ ಲವ್ ಯೂ' ಮೆಸೇಜ್: ಲೆಕ್ಚರರ್‌ಗೆ ಹಿಗ್ಗಾಮುಗ್ಗಾ ಗೂಸಾ! ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 3 ರನ್ ಗಳಿಂದ ಸೋಲುಹಿರಿಯ ನಾಗರಿಕರನ್ನು ಕೈಬಿಟ್ಟರೆ 2 ವರ್ಷ ಜೈಲು, 1 ಲಕ್ಷ ದಂಡ: ಹೊಸ ಕಾನೂನಿಗೆ ರಾಜ್ಯ ಸರ್ಕಾರ ಸಿದ್ಧತೆ ಎಥೆನಾಲ್ ಉತ್ಪಾದನೆಗೆ ಕಬ್ಬು ಬಳಕೆ ನಿಷೇಧ: ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್ ನೋಟಿಸ್‌ ಆಸ್ಟ್ರೇಲಿಯಾ ಗೆ ಕೊನೆಯ ದಿನ 288 ರನ್ ಗಳ ಗೆಲುವಿನ ಗುರಿ ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ : ನಿರಾಣಿ ಫ್ಯಾಕ್ಟರಿಯಿಂದ ಸಕ್ಕರೆ ಸಾಗಿಸುತ್ತಿದ್ದ 5 ಲಾರಿಗಳ ತಡೆ