ಹುಬ್ಬಳ್ಳಿ : ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬಗ್ಗೆ ಅಕ್ರಮದ ಆರೋಪಗಳು ಕೇಳಿ ಬರುತ್ತಿವೆ. ನಿನ್ನೆಯಷ್ಟೇ ರಾಮನಗರದಲ್ಲಿ ಚೌಟ್ರಿಯಲ್ಲಿ SIR ಮಾಡುತ್ತಿರುವ ಆರೋಪ ಕೇಳಿಬಂದಿತ್ತು.
ಇದೀಗ ಹುಬ್ಬಳ್ಳಿ-ಧಾರವಾಡದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ ಬೃಹತ್ ಅಕ್ರಮ ಬಯಲಾಗಿದ್ದು, ಈ ಕುರಿತಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.ಜೊತೆಗೆ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಹುಬ್ಬಳ್ಳಿ-ಧಾರವಾಡ ರಾಮನಗರ, ಶಿಗ್ಗಾಂವಿ-ಸವನೂರ ಬೆನ್ನಲ್ಲೇ ಈಗ ಹುಬ್ಬಳ್ಳಿ-ಧಾರವಾಡ ಪೂರ್ವ-72 ವಿಧಾನಸಭಾ ಕ್ಷೇತ್ರದ ವಾರ್ಡ್ ನಂ. 63, ಬೂತ್ ನಂ. 16 ರಲ್ಲೂ ಮತದಾರರ ಪಟ್ಟಿ ಪರಿಷ್ಕರಣೆಯ ನಿಯಮಬಾಹಿರ ಕೃತ್ಯ ಬಹಿರಂಗಗೊಂಡಿದೆ ಎಂದಿದ್ದಾರೆ.


