Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ನು ಭಾರತ- ಪಾಕ್ ಕ್ರಿಕೆಟ್ ಬಾಗಿಲು ಸಂಪೂರ್ಣವಾಗಿ ಮುಚ್ಚುವುದೇ?

Advertisement
ಭಾರತ ಪಾಕಿಸ್ತಾನ ನಡುವಿನ ದ್ವಿಪಕ್ಷಿಯ ಸರಣಿ ನಿಂತು ಹೋಗಿ ಹಲವು ವರ್ಷಗಳೇ ಕಳೆದಿವೆ. ಸದ್ಯ ಈ ಎರಡು ರಾಷ್ಟ್ರಗಳ ತಂಡಗಳು ಐಸಿಸಿ ಆಯೋಜಿತ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿ ಆಗುತ್ತಿವೆ. ಭಾರತ-ಪಾಕ್​ ಪಂದ್ಯ ಅಭಿಮಾನಿಗಳಿಗೆ ಹೆಚ್ಚಿನ ರಸದೌತಣ ನೀಡುತ್ತದೆ. ಇದೇ ಕಾರಣಕ್ಕೆ ಐಸಿಸಿ ಈ ಎರಡೂ ತಂಡಗಳನ್ನು ಒಂದೇ ಗುಂಪಿನಲ್ಲಿ ಇರಿಸುತ್ತದೆ.

ಆದರೆ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ ಮತ್ತು ಪಾಕಿಸ್ತಾನ ತಂಡಗಳು​​ ಐಸಿಸಿ ಟೂರ್ನಿಗಳಲ್ಲಿ ಒಂದೇ ಗುಂಪಿನಲ್ಲಿ ಆಡದಿರಲು ಯೋಚಿಸುತ್ತಿದೆ ಎಂಬ ವರದಿಗಳಾಗಿದ್ದು ಈ ನಿಟ್ಟಿನಲ್ಲಿ ಐಸಿಸಿಗೂ ಪತ್ರ ಬರೆಯಲಾಗಿದೆ ಎಂದು ಹೇಳಲಾಗುತ್ತಿದೆ. ಭವಿಷ್ಯದಲ್ಲಿ ಭಾರತ ಮತ್ತು ಪಾಕಿಸ್ತಾನವನ್ನು ಒಂದೇ ಗುಂಪಿನಲ್ಲಿ ಇರಿಸಬಾರದು (ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ) ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಯಾಗಿದೆ. ಆದರೆ ಬಿಸಿಸಿಐನಿಂದ ಈ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

ಕ್ರಿಕ್‌ಬಜ್ ವರದಿಯ ಪ್ರಕಾರ, ಬಿಸಿಸಿಐನ ಉನ್ನತ ಅಧಿಕಾರಿಗಳು ಈ ಬಗ್ಗೆ ಯೋಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. "ಭಯೋತ್ಪಾದನಾ ದಾಳಿಯ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಪಾಕಿಸ್ತಾನದೊಂದಿಗಿನ ಕ್ರಿಕೆಟ್ ಸಂಬಂಧಗಳನ್ನು ಕಡಿತಗೊಳಿಸುವಂತೆಯೂ ಬೇಡಿಕೆಗಳು ಬರುತ್ತಿವೆ. ಬಿಸಿಸಿಐನ ಉನ್ನತ ಪದಾಧಿಕಾರಿಯೊಬ್ಬರು ಇದೇ ವಿಷಯವನ್ನು ಉಲ್ಲೇಖಿಸಿ, ಇದು ಬಹಳ ಸೂಕ್ಷ್ಮ ವಿಷಯವಾಗಿದೆ, ಆದ್ದರಿಂದ ಚರ್ಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಭವಿಷ್ಯದಲ್ಲಿ ಏನಾಗುತ್ತದೆ ಎಂದು ನಾವು ಹೇಳಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ.

ಈ ವರ್ಷ ಚಾಂಪಿಯನ್ಸ್ ಟ್ರೋಫಿ ಈಗಾಗಲೇ ನಡೆದಿದೆ ಎಂದು ತಿಳಿದಿದೆ. ಪಾಕಿಸ್ತಾನ ಈ ಟೂರ್ನಿಗೆ ಆತಿಥ್ಯ ವಹಿಸಿಕೊಂಡಿತ್ತು. ಆದರೆ ಪಾಕ್​ಗೆ ಪ್ರಯಾಣಿಸಲು ಭಾರತ ಹಿಂದೇಟು ಹಾಕಿದ್ದಾಕ್ಕೆ ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆದವು. ಕೊನೆಯಲ್ಲಿ, ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.

ಈ ವರ್ಷ ಪುರುಷರ ವಿಭಾಗದಲ್ಲಿ ಯಾವುದೇ ಐಸಿಸಿ ಟೂರ್ನಿಗಳಿಲ್ಲ. ಮುಂದಿನ ವರ್ಷ ಟಿ20 ವಿಶ್ವಕಪ್ ಇದೆ. ಬಳಿಕ ಏಷ್ಯಾ ಕಪ್ ಕೂಡ ಪಂದ್ಯಾವು ನಡೆಯಲಿದೆ ಇದು ಐಸಿಸಿ ಪಂದ್ಯಾವಳಿಯಲ್ಲದಿದ್ದರೂ ಬಿಸಿಸಿಐ ಇದನ್ನು ಆಯೋಜಿಸುತ್ತದೆ. ಬಿಸಿಸಿಐ ಮತ್ತು ಎಸಿಸಿ ಈ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ನಡೆಸಬೇಕೆಂದು ಬಯಸುತ್ತವೆ. ಮಹಿಳಾ ವಿಶ್ವಕಪ್ ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ನಡೆಯಲಿದೆ. ಇದಕ್ಕೆ ಪಾಕಿಸ್ತಾನ ಕೂಡ ಅರ್ಹತೆ ಪಡೆದಿದೆ. ಭಾರತದ ವಿರುದ್ಧದ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ನಡೆಸಲಾಗುತ್ತದೆಯೇ ಅಥವಾ ರದ್ದುಗೊಳಿಸಲಾಗುತ್ತದೆಯೇ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಬೇಕಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ