Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಿಗ್ಗೆ ಅಥವಾ ರಾತ್ರಿ ಯಾವಾಗ ಸ್ನಾನ ಮಾಡುವುದು ಒಳ್ಳೆಯದು?

Advertisement
ಆಯುರ್ವೇದದಲ್ಲಿ, ಸ್ನಾನವು ದೇಹ ಮತ್ತು ಮನಸ್ಸನ್ನು ತಾಜಾ ಮತ್ತು ಶಾಂತವಾಗಿಡುವ ಕ್ರಿಯೆಯಾಗಿದೆ. ಆದರೆ ಯಾವ ಸಮಯದಲ್ಲಿ ಸ್ನಾನ ಮಾಡುವುದು ಒಳ್ಳೆಯದು ಎಂಬುದನ್ನುತಿಳಿದಿರಬೇಕಾಗುತ್ತದೆ. ಅದರಲ್ಲಿಯೂ ಊಟದ ನಂತರವೂ ಸ್ನಾನ ಮಾಡಬಾರದು ಎಂಬ ಮಾತನ್ನು ನೀವು ಕೇಳಿರಬಹುದು. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ, ಅಜೀರ್ಣದಂತಹ ಜೀರ್ಣಕಾರಿ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಹೇಳಲಾಗುತ್ತದೆ. ಹಾಗಾದರೆ ಸ್ನಾನ ಯಾವಾಗ ಮಾಡಬೇಕು? ಬೆಳಿಗ್ಗೆ ಮತ್ತು ರಾತ್ರಿ ಸ್ನಾನ, ಇವೆರಡರಲ್ಲಿ ಯಾವುದು ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

ಪ್ರತಿದಿನ ಸ್ನಾನ ಮಾಡುವ ಅಭ್ಯಾಸ ಎಲ್ಲರಿಗೂ ಇರುತ್ತದೆ. ನಮ್ಮ ಆರೋಗ್ಯ (Health) ಚೆನ್ನಾಗಿರಲು ಸ್ನಾನ ಮಾಡುವುದು ಅತ್ಯಗತ್ಯ. ಸ್ನಾನವು ದೇಹವನ್ನು ಶುದ್ಧೀಕರಿಸುವುದು ಮಾತ್ರವಲ್ಲ ನಮ್ಮ ಮನಸ್ಸಿಗೂ ನೆಮ್ಮದಿ ಕೊಡುತ್ತದೆ. ಆದರೆ ಹೆಚ್ಚಿನವರು ಬೆಳಿಗ್ಗೆ ಸ್ನಾನ (Morning bath) ಮಾಡುತ್ತಾರೆ. ಇನ್ನು ಕೆಲವರು ರಾತ್ರಿ ಸಮಯದಲ್ಲಿ ಸ್ನಾನ ಮಾಡುತ್ತಾರೆ. ಭಾರತೀಯರಾದ ನಾವು ಹೆಚ್ಚಾಗಿ ಬೆಳಿಗ್ಗೆ ಸ್ನಾನ ಮಾಡುವುದಕ್ಕೆ ಇಚ್ಚಿಸುತ್ತೇವೆ. ಆದರೆ ಚೀನಾ (China), ಜಪಾನ್ (Japan), ಮತ್ತು ಕೊರಿಯಾದಂತಹ ದೇಶಗಳ ಜನರು ರಾತ್ರಿ ಸಮಯದಲ್ಲಿ ಸ್ನಾನ ಮಾಡುತ್ತಾರೆ. ಆದರೆ, ನೀವು ಎಂದಾದರೂ ಇವೆರಡರಲ್ಲಿ ಯಾವುದು ಉತ್ತಮ ಎಂದು ಯೋಚಿಸಿದ್ದೀರಾ? ವೈಜ್ಞಾನಿಕವಾಗಿ ಯಾವುದು ಒಳ್ಳೆಯದು ತಿಳಿದುಕೊಳ್ಳಿ.

ರಾತ್ರಿ ಸಮಯದಲ್ಲಿ ಸ್ನಾನ ಮಾಡುವುದು ಒಳ್ಳೆಯದೇ?
ಸಾಮಾನ್ಯವಾಗಿ ಅನೇಕರು ಸಂಜೆ ಅಥವಾ ರಾತ್ರಿ ಸಮಯದಲ್ಲಿ ಸ್ನಾನ ಮಾಡುತ್ತಾರೆ. ಈ ರೀತಿ ಮಾಡುವುದರಿಂದ ಹಗಲಿನಲ್ಲಿ ದೇಹದ ಮೇಲೆ ಸಂಗ್ರಹವಾದ ವಿಷ ಮತ್ತು ಕೊಳೆ ಸಂಪೂರ್ಣವಾಗಿ ಹೋಗುತ್ತದೆ. ಜೊತೆಗೆ ರಾತ್ರಿ ಸಮಯದಲ್ಲಿ ವಿಶ್ರಾಂತಿ ಬೇಕಾಗಿರುವುದರಿಂದ ನಿದ್ದೆ ಚೆನ್ನಾಗಿ ಬರಲು ಈ ರೀತಿ ಮಾಡುತ್ತಾರೆ. ಇದರಿಂದ ಒತ್ತಡ ಕಡಿಮೆಯಾಗುತ್ತದೆ ಎಂಬ ನಂಬಿಕೆ ಹಲವರದ್ದು. ಅದರಲ್ಲಿಯೂ ಚೀನಾದಂತಹ ದೇಶ ಆರ್ದ್ರ ಮತ್ತು ಉಷ್ಣವಲ ಪ್ರದೇಶವಾಗಿರುವುದರಿಂದ ಇಲ್ಲಿನ ಜನ ಹೆಚ್ಚು ಬೆವರುತ್ತಾರೆ ಅದಕ್ಕಾಗಿಯೇ ಅವರು ರಾತ್ರಿ ಸಮಯದಲ್ಲಿ ಸ್ನಾನ ಮಾಡಲು ಇಷ್ಟಪಡುತ್ತಾರೆ. ತಜ್ಞರು ಕೂಡ ರಾತ್ರಿ ಸಮಯದಲ್ಲಿ ಸ್ನಾನ ಮಾಡುವುದು ಒಳ್ಳೆಯದು ಎಂದು ಹೇಳುತ್ತಾರೆ. ದಿನವಿಡೀ ಕಷ್ಟಪಟ್ಟು ಕೆಲಸ ಮಾಡಿದ ಬಳಿಕ ಸ್ನಾನ ಮಾಡುವುದರಿಂದ ಆಯಾಸ ಮಾಯವಾಗುತ್ತದೆ ಜೊತೆಗೆ ಚೆನ್ನಾಗಿ ನಿದ್ರೆ ಬರುತ್ತದೆ.

ಯಾವಾಗ ಸ್ನಾನ ಮಾಡಬೇಕು, ಯಾವಾಗ ಮಾಡಬಾರದು?
ಇನ್ನು ಹಲವರು ಬೆಳಿಗ್ಗೆ ಮತ್ತು ರಾತ್ರಿ ಎರಡು ಸಮಯದಲ್ಲಿಯೂ ಸ್ನಾನ ಮಾಡುತ್ತಾರೆ. ಆಯುರ್ವೇದದಲ್ಲಿ ಬೆಳಿಗ್ಗೆ ಸೂರ್ಯೋದಯಕ್ಕೆ ಮೊದಲು ಮತ್ತು ಸಂಜೆ ಸೂರ್ಯಾಸ್ತದ ಮೊದಲು ಸ್ನಾನ ಮಾಡುವುದು ಉತ್ತಮ ಎಂದು ಹೇಳಲಾಗುತ್ತದೆ. ಅಲ್ಲದೆ, ಆಯುರ್ವೇದದ ಪ್ರಕಾರ ಮಧ್ಯಾಹ್ನ ಸ್ನಾನ ಮಾಡುವುದು ಸೂಕ್ತವಲ್ಲ. ಮಧ್ಯಾಹ್ನ ಸ್ನಾನ ಮಾಡುವುದರಿಂದ ಅನೇಕ ರೋಗಗಳು ಬರಬಹುದು. ಜೊತೆಗೆ ಉರಿಯೂತಕ್ಕೆ ಕಾರಣವಾಗುತ್ತದೆ ಇದನ್ನು ಮಯೋಸಿಟಿಸ್ ಎಂದು ಕರೆಯಲಾಗುತ್ತದೆ. ಮಧ್ಯಾಹ್ನ ಸ್ನಾನ ಮಾಡುವುದರಿಂದ ಬೆನ್ನು ನೋವು, ಮೊಣಕಾಲು ನೋವು ಮತ್ತು ಕಣ್ಣಿನ ಸಮಸ್ಯೆಗಳು ಕೂಡ ಉಂಟಾಗಬಹುದು.

ಊಟದ ನಂತರವೂ ಸ್ನಾನ ಮಾಡಬಾರದು ಎಂದು ತಜ್ಞರು ಹೇಳುತ್ತಾರೆ. ಊಟದ ನಂತರ, ಆಹಾರವನ್ನು ಜೀರ್ಣಿಸಿಕೊಳ್ಳಲು ಹೊಟ್ಟೆಗೆ ಹೆಚ್ಚಿನ ಶಕ್ತಿ ಮತ್ತು ಸರಿಯಾದ ಪ್ರಮಾಣದ ದೇಹದ ತಾಪಮಾನ ಬೇಕು. ಜೊತೆಗೆ ಆಹಾರ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ಊಟ ಆದ ಮೇಲೆ ಸ್ನಾನ ಮಾಡುವುದು ಒಳ್ಳೆಯದಲ್ಲ. ಇದು ಜೀರ್ಣಕಾರಿ ಸಮಸ್ಯೆಗಳಿಗೆ ಕಾರಣವಾಗಬಹುದು. ಅದಕ್ಕಾಗಿಯೇ ಊಟವಾದ ಮೇಲೆ, ಒಂದು ಗಂಟೆ ಅಥವಾ ಒಂದೂವರೆ ಗಂಟೆಯ ನಂತರ ತಲೆ ಕೂದಲನ್ನು ಮಾತ್ರ ತೊಳೆದುಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ