Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ : ಯು.ಟಿ ಖಾದರ್ 

Advertisement

ಬೆಂಗಳೂರು: "ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ ಹೋಗುತ್ತಿಲ್ಲ. ಬದಲಿಗೆ ನನ್ನ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ಮತ್ತು ಅವುಗಳನ್ನು ಪರಿಹರಿಸಲು ಮಂಗಳೂರಿಗೆ ತೆರಳುತ್ತಿದ್ದೇನೆ" ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಕುರಿತಾದ ಚರ್ಚೆಗಳಿಗೆ ತೆರೆ ಎಳೆದರು.

"ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷವೇ ನಿರ್ಧಾರ ಮಾಡುತ್ತದೆ. ಹಿಂದೆ ನನಗೆ ಸಚಿವ ಸ್ಥಾನ ಕೊಟ್ಟಾಗ ಉತ್ತಮವಾಗಿ ಕೆಲಸ ಮಾಡಿದ್ದೇನೆ.

ಶಾಸಕನಾಗಿದ್ದಾಗ 'ಸದನ ವೀರ' ಪ್ರಶಸ್ತಿ ಪಡೆದಿದ್ದೆ, ಸಚಿವನಾಗಿದ್ದಾಗ ನನ್ನ ಕೆಲಸವನ್ನು ಗುರುತಿಸಿ ರಾಷ್ಟ್ರ ಪ್ರಶಸ್ತಿಯೂ ಒಲಿದು ಬಂದಿತ್ತು. 

ನನ್ನ ಕಾರ್ಯವೈಖರಿಯನ್ನು ನೋಡಿಯೇ ಸಿದ್ದರಾಮಯ್ಯನವರು ಈ ಹಿಂದೆ ನನ್ನನ್ನು ವಿರೋಧ ಪಕ್ಷದ ಉಪನಾಯಕನನ್ನಾಗಿ ಮಾಡಿದ್ದರು.

ಈಗ ಸ್ಪೀಕರ್ ಜವಾಬ್ದಾರಿ ನೀಡಿದ್ದಾರೆ, ಅದನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ. ಮುಂದೆ ಪಕ್ಷ ಏನು ಜವಾಬ್ದಾರಿ ಕೊಡುತ್ತದೋ ನೋಡೋಣ" ಎಂದರು.

ಮುಂದುವರಿದು ಮಾತನಾಡಿದ ಅವರು, "ನಾನು ಎಂದಿಗೂ ಯಾವುದೇ ಸ್ಥಾನಮಾನವನ್ನು ಬಯಸಿ ಅಥವಾ ಲಾಬಿ ಮಾಡಿ ಪಡೆದವನಲ್ಲ. ಪಕ್ಷ ಏನೇ ತೀರ್ಮಾನ ಕೈಗೊಂಡರೂ ನಾನು ಅದನ್ನು ಸಂತೋಷ ಮತ್ತು ಸಮಾಧಾನದಿಂದ ಸ್ವೀಕರಿಸುತ್ತೇನೆ. ನಾನು ದೆಹಲಿಗೆ ಹೋಗುತ್ತಿಲ್ಲ, ಮಂಗಳೂರಿಗೆ ಹೋಗುತ್ತಿದ್ದೇನೆ" ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ